Acts 5:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ, ಬಂದ ಹಣದಲ್ಲಿ ಒಂದು ಭಾಗವನ್ನು ಮಾತ್ರ ಅವನು ಅಪೊಸ್ತಲರ ಪಾದಗಳ ಬಳಿ ಇಟ್ಟನು. ಅವನು ಸ್ವಲ್ಪ ಹಣವನ್ನು ತನಗೋಸ್ಕರ ರಹಸ್ಯವಾಗಿಟ್ಟುಕೊಂಡನು. ಅವನ ಹೆಂಡತಿಗೆ ಇದು ತಿಳಿದಿತ್ತು. ಆಕೆಯೂ ಅದಕ್ಕೆ ಒಪ್ಪಿಕೊಂಡಿದ್ದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೆಂಡತಿಯ ಸಮ್ಮತಿಯಿಂದ ಅದರ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಉಳಿದ ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.
Kannada BSI Bible 2016
ಅದರ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಟ್ಟು ಇನ್ನೊಂದು ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು; ಇದು ಅವನ ಹೆಂಡತಿಗೂ ತಿಳಿದಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೆಂಡತಿಯ ಸಮ್ಮತಿಯಿಂದ ಅದರ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಒಂದು ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.
Kannada Bible (KNCL) BSI 2016
ಬಂದ ಹಣದಲ್ಲಿ ಒಂದು ಭಾಗವನ್ನು ಅನನೀಯನು, ತನ್ನ ಪತ್ನಿಯ ಸಮ್ಮತಿ ಪಡೆದು, ಬಚ್ಚಿಟ್ಟುಕೊಂಡನು. ಉಳಿದುದನ್ನು ಪ್ರೇಷಿತರಿಗೆ ಪಾದಕಾಣಿಕೆಯಾಗಿ ಒಪ್ಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತನ್ನ ಹೆಂಡತಿಯ ಪೂರ್ಣ ತಿಳುವಳಿಕೆಯಿಂದ, ಬಂದ ಹಣದಲ್ಲಿ ಒಂದು ಭಾಗವನ್ನು ತನಗಾಗಿ ಇಟ್ಟುಕೊಂಡು, ಉಳಿದ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿಟ್ಟನು.