Acts 5:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಅವರು ಮರುದಿನ ಮುಂಜಾನೆ ದೇವಾಲಯಕ್ಕೆ ಹೋಗಿ ಉಪದೇಶ ಮಾಡತೊಡಗಿದರು. ಪ್ರಧಾನಯಾಜಕನು ಮತ್ತು ಅವನ ಸ್ನೇಹಿತರು ದೇವಾಲಯಕ್ಕೆ ಬಂದರು. ಅವರು ಯೆಹೂದ್ಯನಾಯಕರ ಮತ್ತು ಇಸ್ರೇಲರಲ್ಲಿ ಪ್ರಮುಖರಾಗಿದ್ದವರ ಸಭೆಯನ್ನು ಸೇರಿಸಿದರು. ಬಳಿಕ ಅಪೊಸ್ತಲರನ್ನು ತಮ್ಮ ಬಳಿಗೆ ಕರೆದುಕೊಂಡು ಬರಲು ಕೆಲವರನ್ನು ಸೆರೆಮನೆಗೆ ಕಳುಹಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದನ್ನು ಕೇಳಿದ ಅವರು ಬೆಳಗಿನ ಜಾವದಲ್ಲಿಯೇ ದೇವಾಲಯದೊಳಗೆ ಹೋಗಿ ಸುವಾರ್ತೆಯನ್ನು ಸಾರಿದರು. ಇತ್ತ ಮಹಾಯಾಜಕನೂ, ಅವನ ಜೊತೆಯಲ್ಲಿದ್ದವರೂ ಬಂದು ಹಿರೀಸಭೆಯನ್ನೂ, ಇಸ್ರಾಯೇಲ್ಯರ ಹಿರಿಯರೆಲ್ಲರನ್ನೂ ಕೂಡಿಸಿ, ಅವರನ್ನು ಕರತರುವುದಕ್ಕೆ ಓಲೇಕಾರರನ್ನು ಸೆರೆಮನೆಗೆ ಕಳುಹಿಸಿದರು.
Kannada BSI Bible 2016
ಅವರು ಅದನ್ನು ಕೇಳಿದವರಾಗಿ ಬೆಳಗಿನ ಜಾವದಲ್ಲಿಯೇ ದೇವಾಲಯದೊಳಕ್ಕೆ ಪ್ರವೇಶಿಸಿ ಬೋಧಿಸಿದರು. ಇತ್ತ ಮಹಾಯಾಜಕನೂ ಅವನ ಕೂಡ ಇದ್ದವರೂ ಬಂದು ಆಲೋಚನಾ ಸಭೆಯನ್ನೂ ಇಸ್ರಾಯೇಲ್‌ ಮಕ್ಕಳ ಶಾಸನ ಸಭೆಯನ್ನೂ ಕೂಡಿಸಿ ಅಪೊಸ್ತಲರನ್ನು ಕರತರುವದಕ್ಕಾಗಿ ಸೆರೆ ಮನೆಗೆ ಕಳುಹಿಸಿದರು
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಈ ಆಜ್ಞೆಯನ್ನು ಹೊಂದಿ ಬೆಳಕುಹರಿಯುವಾಗಲೇ ದೇವಾಲಯದೊಳಗೆ ಹೋಗಿ ಉಪದೇಶ ಮಾಡಿದರು. ಇತ್ತಲಾಗಿ ಮಹಾಯಾಜಕನೂ ಅವನ ಜೊತೆಯಲ್ಲಿದ್ದವರೂ ಬಂದು ಹಿರೀಸಭೆಯನ್ನೂ ಇಸ್ರಾಯೇಲ್ಯರ ಯಜಮಾನರ ಸಭೆಯೆಲ್ಲವನ್ನೂ ಕೂಡಿಸಿ ಅವರನ್ನು ಕರತರುವದಕ್ಕೆ ಸೆರೆಮನೆಗೆ ಕಳುಹಿಸಿದರು.
Kannada Bible (KNCL) BSI 2016
ಅದರಂತೆ ಪ್ರೇಷಿತರು ಮುಂಜಾವದಲ್ಲೇ ದೇವಾಲಯವನ್ನು ಪ್ರವೇಶಿಸಿ ಬೋಧಿಸಲಾರಂಭಿಸಿದರು. ಇತ್ತ ಪ್ರಧಾನಯಾಜಕನೂ ಅವನ ಸಂಗಡಿಗರೂ ಜೊತೆಗೂಡಿ ಯೆಹೂದ್ಯ ಪ್ರಮುಖರನ್ನೊಳಗೊಂಡ ಶ್ರೇಷ್ಠ ನ್ಯಾಯಸಭೆಯನ್ನು ಕರೆದರು. ಅನಂತರ ಪ್ರೇಷಿತರನ್ನು ಆ ಸಭೆಯ ಮುಂದೆ ಕರೆತರುವಂತೆ ಸೆರೆಮನೆಯ ಅಧಿಕಾರಿಗಳಿಗೆ ಆಜ್ಞೆಯಿತ್ತರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರಾತಃಕಾಲದಲ್ಲಿ ಅವರು ತಮಗೆ ಹೇಳಿದಂತೆಯೇ ದೇವಾಲಯವನ್ನು ಪ್ರವೇಶಿಸಿ ಜನರಿಗೆ ಬೋಧಿಸಲು ಪ್ರಾರಂಭಿಸಿದರು. ಮಹಾಯಾಜಕನು ಮತ್ತು ಅವನೊಂದಿಗಿದ್ದವರು ಕೂಡಿಬಂದಾಗ, ನ್ಯಾಯಸಭೆಯನ್ನೂ ಇಸ್ರಾಯೇಲರ ಹಿರಿಯರ ಪೂರ್ಣಮಂಡಳಿಯನ್ನೂ ಕೂಡಿಸಿ, ಸೆರೆಮನೆಯಿಂದ ಅಪೊಸ್ತಲರನ್ನು ಕರೆಕಳುಹಿಸಿದರು.