Acts 5:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಸೆರೆಮನೆ ಮುಚ್ಚಿತ್ತು ಮತ್ತು ಬೀಗವನ್ನು ಹಾಕಲಾಗಿತ್ತು. ಕಾವಲುಗಾರರು ಬಾಗಿಲ ಬಳಿ ನಿಂತುಕೊಂಡಿದ್ದರು. ಆದರೆ ನಾವು ಬಾಗಿಲುಗಳನ್ನು ತೆರೆದಾಗ ಸೆರೆಮನೆಯು ಬರಿದಾಗಿತ್ತು!” ಎಂದು ತಿಳಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಸೆರೆಮನೆಯು ಭದ್ರವಾಗಿ ಮುಚ್ಚಿರುವುದನ್ನೂ, ಕಾವಲುಗಾರರು ಬಾಗಿಲುಗಳಲ್ಲಿ ನಿಂತಿರುವುದನ್ನೂ ಕಂಡೆವು; ಆದರೆ ತೆರೆದಾಗ ಒಳಗೆ ಒಬ್ಬರನ್ನೂ ಕಾಣಲಿಲ್ಲ” ಎಂದು ತಿಳಿಸಿದರು.
Kannada BSI Bible 2016
ನಿಜವಾಗಿಯೂ ಸೆರೆಮನೆಯು ಎಲ್ಲಾ ಭದ್ರತೆಯಿಂದ ಮುಚ್ಚಲ್ಪಟ್ಟದ್ದನ್ನೂ ಕಾವಲುಗಾರರು ಬಾಗಲುಗಳಲ್ಲಿ ನಿಂತಿರುವದನ್ನೂ ನಾವು ಕಂಡೆವು; ಆದರೆ ಅದನ್ನು ತೆರೆದಾಗ ನಾವು ಯಾರನ್ನೂ ಒಳಗೆ ಕಾಣಲಿಲ್ಲ ಎಂದು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಾವಲಿನ ಮನೆ ಪೂರ್ಣ ಭದ್ರವಾಗಿ ಮುಚ್ಚಿರುವದನ್ನೂ ಕಾವಲುಗಾರರು ಬಾಗಿಲುಗಳಲ್ಲಿ ನಿಂತಿರುವದನ್ನೂ ಕಂಡೆವು; ಆದರೆ ತೆರೆದಾಗ ಒಳಗೆ ಒಬ್ಬರನ್ನೂ ಕಾಣಲಿಲ್ಲ ಎಂದು ತಿಳಿಸಿದರು.
Kannada Bible (KNCL) BSI 2016
“ನಾವು ಸೆರೆಮನೆಗೆ ಹೋದಾಗ ಅದಕ್ಕೆ ಹಾಕಿದ್ದ ಬೀಗ ಮುದ್ರೆಯೇನೋ ಭದ್ರವಾಗಿತ್ತು. ಪಹರೆಯವರು ದ್ವಾರದಲ್ಲಿ ಕಾವಲಿದ್ದರು. ಆದರೆ ದ್ವಾರವನ್ನು ತೆರೆದು ನೋಡಿದಾಗ ಒಳಗೆ ಯಾರನ್ನೂ ನಾವು ಕಾಣಲಿಲ್ಲ,” ಎಂದು ತಿಳಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಸೆರೆಮನೆಯ ಬಾಗಿಲುಗಳು ಭದ್ರಪಡಿಸಿರುವುದನ್ನೂ ದ್ವಾರಗಳ ಬಳಿ ಕಾವಲುಗಾರರು ನಿಂತಿರುವುದನ್ನೂ ಕಂಡೆವು. ಆದರೆ ದ್ವಾರಗಳನ್ನು ನಾವು ತೆರೆದಾಗ ಒಳಗೆ ಯಾರೂ ಇರಲಿಲ್ಲ,” ಎಂದು ವರದಿಮಾಡಿದರು.