Acts 5:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವಾಲಯದ ಕಾವಲುಗಾರರ ನಾಯಕನು ಮತ್ತು ಮಹಾಯಾಜಕರು ಇದನ್ನು ಕೇಳಿ ಗಲಿಬಿಲಿಗೊಂಡರು. ಇದರಿಂದ ಏನಾಗುವುದೋ ಎಂದು ಅವರು ಭಯಪಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವಾಲಯದ ಅಧಿಪತಿಯೂ, ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತೋ ಎಂದು ಕಳವಳಗೊಂಡರು.
Kannada BSI Bible 2016
ಆಗ ಮಹಾಯಾಜಕನೂ ದೇವಾಲಯದ ಅಧಿಪತಿಯೂ ಪ್ರಧಾನಯಾಜಕರೂ ಇವುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತು ಎಂದು ಅವರ ವಿಷಯದಲ್ಲಿ ಸಂದೇಹಪಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವಾಲಯದ ಅಧಿಪತಿಯೂ ಮಹಾಯಾಜಕರೂ ಈ ಮಾತುಗಳನ್ನು ಕೇಳಿ ಇದರಿಂದ ಏನಾದೀತೋ ಎಂದು ಕಳವಳಪಟ್ಟರು.
Kannada Bible (KNCL) BSI 2016
ದೇವಾಲಯದ ದಳಪತಿ ಮತ್ತು ಮುಖ್ಯಯಾಜಕರು ಇದನ್ನು ಕೇಳಿ, ಇದರಿಂದೇನಾಗುವುದೋ ಎಂದು ಕಳವಳಗೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ವರದಿಯನ್ನು ಕೇಳಿದಾಗ, ದೇವಾಲಯದ ಕಾವಲುಗಾರರ ದಳಪತಿಯೂ ಮುಖ್ಯಯಾಜಕರೂ ಇದರಿಂದ ಏನಾಗುವುದೋ ಎಂದು ಕಳವಳಪಟ್ಟರು.