Acts 5:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಬೇರೊಬ್ಬನು ಬಂದು ಅವರಿಗೆ, “ಕೇಳಿ! ನೀವು ಸೆರೆಮನೆಯಲ್ಲಿ ಹಾಕಿದ್ದ ಜನರು ದೇವಾಲಯದಲ್ಲಿ ನಿಂತಿದ್ದಾರೆ. ಅವರು ಜನರಿಗೆ ಉಪದೇಶ ಮಾಡುತ್ತಿದ್ದಾರೆ!” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಷ್ಟರಲ್ಲಿ ಒಬ್ಬನು ಬಂದು; “ಅಗೋ, ನೀವು ಸೆರೆಮನೆಯಲ್ಲಿಟ್ಟಿದ್ದ ಆ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಉಪದೇಶಮಾಡುತ್ತಿದ್ದಾರೆಂದು” ಅವರಿಗೆ ತಿಳಿಸಿದನು.
Kannada BSI Bible 2016
ಆಗ ಒಬ್ಬನು ಬಂದು ಅವರಿಗೆ--ಇಗೋ, ನೀವು ಸೆರೆಯ ಲ್ಲಿಟ್ಟಿದ್ದ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಬೋಧಿಸುತ್ತಿದ್ದಾರೆ ಎಂದು ಹೇಳಿ ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲಾಗಿ ಯಾರೋ ಒಬ್ಬನು ಬಂದು - ಅಗೋ, ನೀವು ಸೆರೆಮನೆಯಲ್ಲಿಟ್ಟಿದ್ದ ಆ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಉಪದೇಶಮಾಡುತ್ತಿದ್ದಾರೆಂದು ಅವರಿಗೆ ತಿಳಿಸಿದನು.
Kannada Bible (KNCL) BSI 2016
ಅಷ್ಟರಲ್ಲಿ ಒಬ್ಬನು ಅಲ್ಲಿಗೆ ಬಂದು, “ಇಗೋ, ನೀವು ಸೆರೆಮನೆಯಲ್ಲಿಟ್ಟವರು ದೇವಾಲಯದಲ್ಲಿ ನಿಂತು ಜನರಿಗೆ ಬೋಧಿಸುತ್ತಿದ್ದಾರೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯಾರೋ ಒಬ್ಬನು ಬಂದು, “ನೋಡಿರಿ! ನೀವು ಸೆರೆಮನೆಯಲ್ಲಿ ಬಂಧಿಸಿಟ್ಟಿದ್ದ ಆ ಪುರುಷರು ದೇವಾಲಯದ ಅಂಗಳದಲ್ಲಿ ನಿಂತುಕೊಂಡು ಜನರಿಗೆ ಬೋಧಿಸುತ್ತಿದ್ದಾರೆ,” ಎಂದು ವರದಿ ಮಾಡಿದನು.