Acts 5:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ದಳಪತಿ ಮತ್ತು ಅವನ ಜನರು ಹೋಗಿ ಅಪೊಸ್ತಲರನ್ನು ಮರಳಿ ಕರೆತಂದರು. ಆದರೆ ಸೈನಿಕರು ಒತ್ತಾಯ ಮಾಡಲಿಲ್ಲ. ಯಾಕೆಂದರೆ ಅವರು ಜನರಿಗೆ ಭಯಪಟ್ಟರು. ಜನರು ಕೋಪಗೊಂಡು ಕಲ್ಲೆಸೆದು ತಮ್ಮನ್ನು ಕೊಲ್ಲಬಹುದೆಂದು ಅವರು ಹೆದರಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಸೈನ್ಯದ ಅಧಿಕಾರಿಯು ಓಲೇಕಾರರ ಸಂಗಡ ಹೋಗಿ ಅವರನ್ನು ಕರೆದುಕೊಂಡು ಬಂದನು. ಆದರೆ ತಮಗೆ ಜನರು ಕಲ್ಲೆಸೆದಾರೆಂದು ಹೆದರಿ ಅವರನ್ನು ಹಿಂಸಿಸಲಿಲ್ಲ.
Kannada BSI Bible 2016
ಆಗ ಅಧಿಪತಿಯು ಅಧಿಕಾರಿಗಳೊಂದಿಗೆ ಹೋಗಿ ಬಲಾತ್ಕಾರವೇನೂ ಮಾಡದೆ ಅವರನ್ನು ಕರತಂದನು; ಯಾಕಂದರೆ ಜನರು ತಮಗೆ ಕಲ್ಲೆಸೆದಾರು ಎಂದು ಅವರು ಭಯಪಟ್ಟಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅಧಿಪತಿಯು ಓಲೇಕಾರರ ಸಂಗಡ ಹೋಗಿ ಅವರನ್ನು ಕರೆದುಕೊಂಡು ಬಂದನು; ಆದರೆ ತಮಗೆ ಜನರು ಕಲ್ಲೆಸೆದಾರೆಂದು ಹೆದರಿ ಬಲಾತ್ಕಾರ ಮಾಡಲಿಲ್ಲ.
Kannada Bible (KNCL) BSI 2016
ಆಗ ಆ ದಳಪತಿ ಅಧಿಕಾರಿಗಳೊಡನೆ ಹೋಗಿ ಪ್ರೇಷಿತರನ್ನು ಕರೆದುಕೊಂಡು ಬಂದನು. ಜನರು ತಮ್ಮ ಮೇಲೆ ಕಲ್ಲು ತೂರಬಹುದೆಂಬ ಭಯದಿಂದ ಪ್ರೇಷಿತರ ಮೇಲೆ ಅವರು ಯಾವ ಬಲಪ್ರಯೋಗವನ್ನೂ ಮಾಡಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದಳಪತಿಯು ತನ್ನ ಅಧಿಕಾರಿಗಳೊಂದಿಗೆ ಹೋಗಿ ಅಪೊಸ್ತಲರನ್ನು ಕರೆದುಕೊಂಡು ಬಂದನು. ಜನರು ತಮಗೆ ಕಲ್ಲೆಸೆದಾರೆಂಬ ಭಯ ಅವರಿಗಿದ್ದುದರಿಂದ ಅಪೊಸ್ತಲರನ್ನು ಬಲವಂತಮಾಡದೆ ಕರೆದುಕೊಂಡು ಬಂದನು.