Acts 5:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಈ ಮನುಷ್ಯನ (ಯೇಸುವಿನ) ಬಗ್ಗೆ ನೀವು ಬೋಧಿಸಕೂಡದೆಂದು ನಾವು ನಿಮಗೆ ಆಜ್ಞಾಪಿಸಿದೆವು. ಆದರೆ ನೀವು ಮಾಡಿರುವುದೇನು? ನೀವು ಜೆರುಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿಬಿಟ್ಟಿದ್ದೀರಿ. ಈ ಮನುಷ್ಯನ (ಯೇಸುವಿನ) ಸಾವಿಗೆ ನಮ್ಮನ್ನೇ ಜವಾಬ್ದಾರರನ್ನಾಗಿ ಮಾಡಲು ನೀವು ಪ್ರಯತ್ನಿಸುತ್ತಿದ್ದೀರಿ” ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀವು ಈ ಹೆಸರಿನಲ್ಲಿ ಉಪದೇಶಮಾಡಲೇ ಬಾರದೆಂದು ನಾವು ನಿಮಗೆ ಕಟ್ಟಪ್ಪಣೆ ಕೊಡಲಿಲ್ಲವೇ? ಆದರೂ ನೀವು ಯೆರೂಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿದಿರಿ, ಮತ್ತು ಆ ವ್ಯಕ್ತಿಯ ರಕ್ತಕ್ಕೆ ನಾವೇ ಹೊಣೆಗಾರರು ಎಂದು ನಮ್ಮನ್ನು ಜವಾಬ್ಧಾರರನ್ನಾಗಿ ಮಾಡಲು ನೀವು ಪ್ರಯತ್ನಿಸುತ್ತಿದ್ದೀರಿ” ಎಂದು ಹೇಳಿದನು.
Kannada BSI Bible 2016
ಈ ಹೆಸರಿ ನಲ್ಲಿ ಬೋಧಿಸ ಕೂಡದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆ ಕೊಡಲಿಲ್ಲವೇ? ಆದರೂ ಇಗೋ, ನೀವು ಯೆರೂಸಲೇಮನ್ನು ನಿಮ್ಮ ಬೋಧನೆ ಯಿಂದ ತುಂಬಿಸಿ ಈ ಮನುಷ್ಯನ ರಕ್ತವನ್ನು ನಮ್ಮ ಮೇಲೆ ತರುವದಕ್ಕೆ ಉದ್ದೇಶವುಳ್ಳವರಾಗಿದ್ದೀರಲ್ಲಾ ಎಂದು ಅವರನ್ನು ಕೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಈ ಹೆಸರನ್ನು ಎತ್ತಿ ಉಪದೇಶ ಮಾಡಲೇಬಾರದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆಕೊಟ್ಟೆವಲ್ಲಾ; ಆದರೂ ನೀವು ಯೆರೂಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿದಿರಿ, ಮತ್ತು ಆ ಮನುಷ್ಯನನ್ನು ಕೊಲ್ಲಿಸಿದ್ದಕ್ಕೆ ನಮ್ಮನ್ನು ಹೊಣೆಮಾಡಬೇಕೆಂದಿದ್ದೀರಿ ಎಂದು ಹೇಳಿದ್ದಕ್ಕೆ
Kannada Bible (KNCL) BSI 2016
“ಆ ವ್ಯಕ್ತಿಯ ಹೆಸರಿನಲ್ಲಿ ಉಪದೇಶ ಮಾಡಕೂಡದು ಎಂದು ನಿಮಗೆ ಕಟ್ಟಪ್ಪಣೆ ಮಾಡಿದೆವು. ಆದರೂ ನೀವು ಮಾಡಿರುವುದೇನು? ನಿಮ್ಮ ಬೋಧನೆ ಜೆರುಸಲೇಮ್ ಆದ್ಯಂತ ಹಬ್ಬಿಹರಡಿದೆ. ಅಷ್ಟುಮಾತ್ರವಲ್ಲ, ಆ ವ್ಯಕ್ತಿಯ ಕೊಲೆಗೆ ನಮ್ಮನ್ನೇ ಹೊಣೆಗಾರರನ್ನಾಗಿ ಮಾಡಬೇಕೆಂದಿರುವಿರಿ,” ಎಂದು ಆಪಾದಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು, “ಈ ಹೆಸರಿನಲ್ಲಿ ಉಪದೇಶ ಮಾಡಬಾರದೆಂದು ನಾವು ನಿಮಗೆ ಕಟ್ಟುನಿಟ್ಟಾಗಿ ಅಪ್ಪಣೆಕೊಟ್ಟೆವು. ಇಗೋ ನೀವಾದರೋ ನಿಮ್ಮ ಬೋಧನೆಯಿಂದ ಇಡೀ ಯೆರೂಸಲೇಮನ್ನು ತುಂಬಿಸಿರುವಿರಿ. ಅಲ್ಲದೆ ಈ ಮನುಷ್ಯನನ್ನು ಕೊಂದು ರಕ್ತ ಸುರಿಸಿದ ಅಪರಾಧಕ್ಕೆ ನಮ್ಮನ್ನು ನೀವು ಹೊಣೆಮಾಡಲು ಉದ್ದೇಶಿಸಿದ್ದೀರಿ,” ಎಂದು ಹೇಳಿದನು.