Acts 5:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪೇತ್ರನು, “ಅನನೀಯನೇ, ನಿನ್ನ ಹೃದಯವನ್ನು ಆಳಲು ನೀನು ಸೈತಾನನಿಗೆ ಒಪ್ಪಿಸಿಕೊಟ್ಟದ್ದೇಕೆ? ನೀನು ಸುಳ್ಳು ಹೇಳಿ, ಪವಿತ್ರಾತ್ಮನನ್ನು ಮೋಸಪಡಿಸಲು ಪ್ರಯತ್ನಿಸಿದೆ. ನೀನು ನಿನ್ನ ಜಮೀನನ್ನು ಮಾರಿದೆ, ಆದರೆ ಬಂದ ಹಣದಲ್ಲಿ ಒಂದು ಭಾಗವನ್ನು ನೀನು ನಿನಗೋಸ್ಕರ ಇಟ್ಟುಕೊಂಡದ್ದೇಕೆ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಪೇತ್ರನು; “ಅನನೀಯನೇ, ನೀನು ಆ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಪವಿತ್ರಾತ್ಮನನ್ನು ವಂಚಿಸುವಂತೆ ಸೈತಾನನು ನಿನ್ನ ಹೃದಯದಲ್ಲಿ ಏಕೆ ತುಂಬಿಸಿಕೊಂಡಿ?
Kannada BSI Bible 2016
ಆಗ ಪೇತ್ರನು--ಅನನೀಯನೇ, ಪವಿತ್ರಾತ್ಮನಿಗೆ ಸುಳ್ಳು ಹೇಳಿ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಡುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿ ಕೊಂಡದ್ದು ಯಾಕೆ?
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಪೇತ್ರನು - ಅನನೀಯಾ, ಸೈತಾನನು ನಿನ್ನ ಹೃದಯದಲ್ಲಿ ತುಂಬಿಕೊಂಡದ್ದೇನು? ನೀನು ಯಾಕೆ ಆ ಹೊಲದ ಕ್ರಯದಲ್ಲಿ ಕೆಲವನ್ನು ಬಚ್ಚಿಟ್ಟುಕೊಂಡು ಪವಿತ್ರಾತ್ಮನನ್ನು ವಂಚಿಸಬೇಕೆಂದಿದ್ದೀ?
Kannada Bible (KNCL) BSI 2016
ಆಗ ಪೇತ್ರನು, “ಅನನೀಯಾ, ನಿನ್ನ ಆಸ್ತಿಯ ವಿಕ್ರಯದಿಂದ ಬಂದ ಹಣದ ಒಂದು ಭಾಗವನ್ನು ಬಚ್ಚಿಟ್ಟುಕೊಂಡು, ನೀನು ಪವಿತ್ರಾತ್ಮ ಅವರಿಗೆ ಏಕೆ ವಂಚನೆಮಾಡಿದೆ? ನಿನ್ನ ಹೃದಯದಲ್ಲಿ ಪಿಶಾಚಿಗೇಕೆ ಎಡೆಮಾಡಿಕೊಟ್ಟೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಪೇತ್ರನು, “ಅನನೀಯಾ, ಪವಿತ್ರಾತ್ಮ ದೇವರಿಗೆ ಸುಳ್ಳು ಹೇಳುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿಸಿದ್ದು ಏಕೆ? ಆಸ್ತಿಯನ್ನು ಮಾರಿ ಬಂದ ಹಣದಲ್ಲಿ ಒಂದು ಭಾಗವನ್ನು ಇಟ್ಟುಕೊಂಡದ್ದೇಕೆ?