Acts 5:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಘಟನೆಗಳಿಗೆ ನಾವೇ ಸಾಕ್ಷಿಗಳು. ನಾವು ಮಾತ್ರವಲ್ಲದೆ ವಿಧೇಯರಾಗುವ ಎಲ್ಲಾ ಜನರಿಗೆ ದೇವರು ದಯಪಾಲಿಸಿರುವ ಪವಿತ್ರಾತ್ಮನೂ ಸಾಕ್ಷಿಯಾಗಿದ್ದಾನೆ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಕಾರ್ಯಗಳಿಗೆ ನಾವು ಸಾಕ್ಷಿ ಹಾಗೂ ದೇವರು ತನಗೆ ವಿಧೇಯರಾಗಿರುವವರಿಗೆ ದಯಪಾಲಿಸಿರುವ ಪವಿತ್ರಾತ್ಮನು ಸಾಕ್ಷಿ” ಎಂದು ಹೇಳಿದರು.
Kannada BSI Bible 2016
ದೇವರು ತನಗೆ ವಿಧೇಯರಾಗುವವರಿಗೆ ದಯಪಾಲಿಸಿದ ಪವಿತ್ರಾ ತ್ಮನೂ ನಾವೂ ಇವುಗಳಿಗೆ ಆತನ ಸಾಕ್ಷಿಗಳಾಗಿದ್ದೇವೆ ಎಂದು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಕಾರ್ಯಗಳಿಗೆ ನಾವು ಸಾಕ್ಷಿ; ದೇವರು ತನಗೆ ವಿಧೇಯರಾಗಿರುವವರಿಗೆ ದಯಪಾಲಿಸಿರುವ ಪವಿತ್ರಾತ್ಮನೂ ಸಾಕ್ಷಿ ಎಂದು ಹೇಳಿದರು.
Kannada Bible (KNCL) BSI 2016
ಈ ಘಟನೆಗಳಿಗೆ ನಾವು ಸಾಕ್ಷಿಗಳು; ನಾವು ಮಾತ್ರವಲ್ಲ, ದೈವೇಚ್ಛೆಯಂತೆ ನಡೆಯುವವರಿಗೆ ದೇವರು ದಯಪಾಲಿಸುವ ಪವಿತ್ರಾತ್ಮ ಅವರು ಕೂಡ ಸಾಕ್ಷಿಯಾಗಿದ್ದಾರೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಸಂಗತಿಗಳಿಗೆ ನಾವೇ ಸಾಕ್ಷಿಗಳು; ತನಗೆ ವಿಧೇಯರಾಗಿರುವವರಿಗೆ ದೇವರು ದಯಪಾಲಿಸಿದ ಪವಿತ್ರಾತ್ಮ ದೇವರು ಸಾಕ್ಷಿ,” ಎಂದರು.