Acts 5:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಫರಿಸಾಯರಲ್ಲಿ ಒಬ್ಬನು ಸಭೆಯಲ್ಲಿ ಎದ್ದು ನಿಂತುಕೊಂಡನು. ಅವನ ಹೆಸರು ಗಮಲಿಯೇಲ. ಅವನು ಧರ್ಮೋಪದೇಶಕನಾಗಿದ್ದನು ಮತ್ತು ಜನರೆಲ್ಲಾ ಅವನನ್ನು ಗೌರವಿಸುತ್ತಿದ್ದರು. ಕೆಲವು ನಿಮಿಷಗಳವರೆಗೆ ಅಪೊಸ್ತಲರನ್ನು ಸಭೆಯಿಂದ ಹೊರಗೆ ಕಳುಹಿಸಬೇಕೆಂದು ಅವನು ಜನರಿಗೆ ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಎಲ್ಲಾ ಜನರಿಂದ ಗೌರವಿಸಲ್ಪಟ್ಟ ಧರ್ಮಶಾಸ್ತ್ರಿಯಾದ ಗಮಲಿಯೇಲನೆಂಬ ಒಬ್ಬ ಫರಿಸಾಯನು ಹಿರೀಸಭೆಯಲ್ಲಿ ಎದ್ದುನಿಂತು ಈ ಮನುಷ್ಯರನ್ನು ಸ್ವಲ್ಪ ಹೊತ್ತು ಹೊರಗೆ ಕಳುಹಿಸಬೇಕೆಂದು ಅಪ್ಪಣೆಕೊಟ್ಟನು.
Kannada BSI Bible 2016
ಆಗ ನ್ಯಾಯಪ್ರಮಾಣದಲ್ಲಿ ಪಂಡಿತ ನಾಗಿದ್ದು ಎಲ್ಲಾ ಜನರಲ್ಲಿ ಮಾನ ಹೊಂದಿದ ಗಮಲಿ ಯೇಲನೆಂಬ ಒಬ್ಬ ಫರಿಸಾಯನು ಆಲೋಚನಾ ಸಭೆಯಲ್ಲಿ ನಿಂತುಕೊಂಡು ಸ್ವಲ್ಪ ಹೊತ್ತು ಅಪೊಸ್ತಲರನ್ನು ಹೊರಗೆ ಕಳುಹಿಸಬೇಕೆಂದು ಅಪ್ಪಣೆ ಕೊಟ್ಟು ಅವ ರಿಗೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಎಲ್ಲಾ ಜನರಿಂದ ಮಾನಹೊಂದಿದ ನ್ಯಾಯಶಾಸ್ತ್ರಿಯಾದ ಗಮಲಿಯೇಲನೆಂಬ ಒಬ್ಬ ಫರಿಸಾಯನು ಹಿರೀಸಭೆಯಲ್ಲಿ ಎದ್ದುನಿಂತು ಈ ಮನುಷ್ಯರನ್ನು ಸ್ವಲ್ಪ ಹೊತ್ತು ಹೊರಗೆ ಕಳುಹಿಸಬೇಕೆಂದು ಅಪ್ಪಣೆಕೊಟ್ಟು ಸಭೆಯವರಿಗೆ -
Kannada Bible (KNCL) BSI 2016
ಆಗ ಆ ಸಭಾಸದಸ್ಯರಲ್ಲಿ ಒಬ್ಬನಾದ ಗಮಲಿಯೇಲ್ ಎಂಬ ಫರಿಸಾಯನು ಅಲ್ಲಿದ್ದನು. ಅವನೊಬ್ಬ ಗೌರವಾನ್ವಿತ ಮತ್ತು ಧರ್ಮಪಂಡಿತ. ಅವನು ಎದ್ದುನಿಂತು ಪ್ರೇಷಿತರನ್ನು ಸ್ವಲ್ಪಹೊತ್ತು ಸಭೆಯಿಂದ ಹೊರಗೆ ಕಳುಹಿಸುವಂತೆ ಹೇಳಿ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಗಮಲಿಯೇಲ್ ಎಂಬ ಹೆಸರಿನ ಒಬ್ಬ ಫರಿಸಾಯನಿದ್ದನು. ಅವನು ನಿಯಮ ಬೋಧಕನೂ ಎಲ್ಲಾ ಜನರ ಗೌರವಕ್ಕೆ ಪಾತ್ರನೂ ಆಗಿದ್ದನು. ಅವನು ನ್ಯಾಯಸಭೆಯಲ್ಲಿ ಎದ್ದು ನಿಂತುಕೊಂಡು, ಸ್ವಲ್ಪ ಸಮಯ ಅಪೊಸ್ತಲರನ್ನು ಹೊರಗೆ ಕಳುಹಿಸಬೇಕೆಂದು ಆಜ್ಞಾಪಿಸಿದನು.