Acts 5:36 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಮ್ಮೆ, ತೈದ ಎಂಬುವನು ಬಂದದ್ದು ನಿಮ್ಮ ನೆನಪಿನಲ್ಲಿದೆಯೋ? ಅವನು ತನ್ನನ್ನು ಮಹಾಪುರುಷನೆಂದು ಹೇಳಿಕೊಂಡನು. ಸುಮಾರು ನಾನೂರು ಮಂದಿ ಅವನ ಜೊತೆ ಸೇರಿದರು. ಆದರೆ ಅವನು ಕೊಲ್ಲಲ್ಪಟ್ಟನು. ಅವನನ್ನು ಹಿಂಬಾಲಿಸುತ್ತಿದ್ದವರೆಲ್ಲ ಚದರಿ ಓಡಿಹೋದರು. ಅವರಿಂದ ಏನೂ ಮಾಡಲಾಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಕ್ಕಿಂತ ಮೊದಲು ಥೈದನು ಎಂಬ ಒಬ್ಬನು ಎದ್ದು ತಾನೊಬ್ಬ ಮಹಾಪುರುಷನೆಂದು ಹೇಳಿಕೊಂಡನು. ಅವನ ಪಕ್ಷಕ್ಕೆ ಸುಮಾರು ನಾನೂರು ಜನರು ಸೇರಿಕೊಂಡರು, ಅವನು ಕೊಲ್ಲಲ್ಪಟ್ಟನು, ಮತ್ತು ಅವನನ್ನು ನಂಬಿದವರೆಲ್ಲರು ಚದರಿಸಲ್ಪಟ್ಟು ಇಲ್ಲವಾದರು.
Kannada BSI Bible 2016
ಇದಕ್ಕಿಂತ ಮುಂಚೆ ಥೈದನು ಎದ್ದು ತಾನೊಬ್ಬ ಗಣ್ಯವ್ಯಕ್ತಿ ಎಂದು ತನ್ನ ವಿಷಯವಾಗಿ ತಾನೇ ಕೊಚ್ಚಿಕೊಂಡಾಗ ಸುಮಾರು ನಾನೂರು ಜನರು ಅವನೊಂದಿಗೆ ಸೇರಿಕೊಂಡರು; ಅವನು ಕೊಲ್ಲಲ್ಪಟ್ಟದ್ದರಿಂದ ಅವನಿಗೆ ವಿಧೇಯರಾಗಿ ದ್ದವರೆಲ್ಲರೂ ಚದರಿಹೋಗಿ ಇಲ್ಲವಾದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಕ್ಕಿಂತ ಮುಂಚೆ ಥೈದನು ಎದ್ದು ತಾನು ದೊಡ್ಡ ಮನುಷ್ಯನೆಂದು ಹೇಳಿಕೊಂಡನು. ಅವನ ಪಕ್ಷಕ್ಕೆ ಸುಮಾರು ನಾನೂರು ಜನರು ಸೇರಿಕೊಂಡರು. ಅವನು ಕೊಲ್ಲಲ್ಪಟ್ಟನು, ಮತ್ತು ಅವನನ್ನು ನಂಬಿದವರೆಲ್ಲರು ಚದರಿಸಲ್ಪಟ್ಟು ಇಲ್ಲವಾದರು.
Kannada Bible (KNCL) BSI 2016
ಸ್ವಲ್ಪಕಾಲಕ್ಕೆ ಹಿಂದೆ ತೈದ ಎಂಬವನಿದ್ದ. ತಾನೊಬ್ಬ ಮಹಾಪುರುಷನು ಎಂದು ಹೇಳಿಕೊಳ್ಳುತ್ತಿದ್ದ. ಸುಮಾರು ನಾನೂರು ಮಂದಿ ಅವನ ಅನುಯಾಯಿಗಳಾದರು. ಅವನ ಕೊಲೆಯಾದದ್ದೇ, ಅವನನ್ನು ಹಿಂಬಾಲಿಸಿದವರೆಲ್ಲರೂ ಚದರಿಹೋದರು. ಅವನ ಪಕ್ಷ ನಿರ್ನಾಮವಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೆಲವು ದಿನಗಳ ಹಿಂದೆ ಥೈದನೆಂಬವನು ಕಾಣಿಸಿಕೊಂಡು, ತಾನು ಒಬ್ಬ ಗಣ್ಯವ್ಯಕ್ತಿಯೆಂದು ಹೇಳಿಕೊಳ್ಳುತ್ತಾ ಬಂದನು. ಸುಮಾರು ನಾಲ್ಕುನೂರು ಜನರು ಅವನ ಹಿಂಬಾಲಕರಾದರು. ಅವನು ಕೊಲೆಗೀಡಾದನು. ಅವನಿಗೆ ವಿಧೇಯರಾದವರೆಲ್ಲರೂ ಚದರಿಹೋಗಿ ಇಲ್ಲದಂತಾದರು.