Acts 5:37 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ, ಯೂದ ಎಂಬುವನು ಗಲಿಲಾಯದಿಂದ ಬಂದನು. ಅದು ಜನಗಣತಿಯ ಕಾಲವಾಗಿತ್ತು. ಅವನು ಸಹ ಅನುಯಾಯಿಗಳ ಒಂದು ಗುಂಪನ್ನೇ ಕಟ್ಟಿದ. ಅವನು ಸಹ ಕೊಲ್ಲಲ್ಪಟ್ಟನು. ಅವನ ಅನುಯಾಯಿಗಳೆಲ್ಲಾ ಚದರಿ ಓಡಿಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ತರುವಾಯ ಜನಗಣತಿ ಕಾಲದಲ್ಲಿ ಗಲಿಲಾಯದ ಯೂದನು ತಿರುಗಿಬೀಳುವುದಕ್ಕೆ ಎದ್ದು, ಜನರನ್ನು ತನ್ನ ಪಕ್ಷ ಸೇರುವುದಕ್ಕೆ ಅನೇಕರನ್ನು ಪ್ರೇರೇಪಿಸಿದನು. ಅವನೂ ನಾಶವಾದನು, ಮತ್ತು ಅವನನ್ನು ನಂಬಿದವರೆಲ್ಲರು ಚದರಿಹೋದರು.
Kannada BSI Bible 2016
ಈ ಮನುಷ್ಯನ ತರುವಾಯ ಖಾನೇಷುಮಾರಿಯ ದಿನ ಗಳಲ್ಲಿ ಗಲಿಲಾಯದ ಯೂದನು ಎದ್ದು ತನ್ನನ್ನು ಹಿಂಬಾಲಿಸುವಂತೆ ಅನೇಕ ಜನರನ್ನು ಸೆಳೆದನು. ಆದರೆ ಅವನು ಸಹ ನಾಶವಾದನು. ಅವನಿಗೆ ವಿಧೇಯರಾದ ವರೆಲ್ಲರೂ ಚದರಿಹೋದರು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ತರುವಾಯ ಖಾನೇಷುಮಾರಿಯ ಕಾಲದಲ್ಲಿ ಗಲಿಲಾಯದ ಯೂದನು ಎದ್ದು ಜನರನ್ನು ತನ್ನ ಸಹಿತ ತಿರುಗಿಬೀಳುವದಕ್ಕೆ ಪ್ರೇರೇಪಿಸಿದನು. ಅವನೂ ಹಾಳಾದನು; ಮತ್ತು ಅವನನ್ನು ನಂಬಿದವರೆಲ್ಲರು ಚದರಿಹೋದರು.
Kannada Bible (KNCL) BSI 2016
ಅನಂತರ ಜನಗಣತಿಯ ಕಾಲದಲ್ಲಿ ಗಲಿಲೇಯದ ಯೂದ ಎಂಬವನು ಪ್ರಸಿದ್ಧಿಗೆ ಬಂದ. ತನ್ನೆಡೆಗೆ ಹಲವರನ್ನು ಆಕರ್ಷಿಸಿಕೊಂಡ. ಅವನೂ ಹತನಾದ. ಹಿಂಬಾಲಕರೆಲ್ಲರೂ ಚದರಿಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ನಂತರ ಗಲಿಲಾಯದ ಯೂದ ಎಂಬುವವನು ಜನಗಣತಿಯ ದಿನಗಳಲ್ಲಿ ಕಾಣಿಸಿಕೊಂಡು, ಜನರ ಗುಂಪನ್ನು ತಿರುಗಿಬೀಳಲು ನಡೆಸಿದನು. ಅವನು ಸಹ ನಾಶವಾದನು. ಅವನನ್ನು ಹಿಂಬಾಲಿಸಿದವರೆಲ್ಲರೂ ಚದರಿಹೋದರು.