Acts 5:38 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಈಗ ನಾನು ನಿಮಗೆ ಹೇಳುವುದೇನೆಂದರೆ, ಈ ಜನರಿಂದ ದೂರವಾಗಿರಿ. ಅವರನ್ನು ಅವರಷ್ಟಕ್ಕೇ ಬಿಟ್ಟುಬಿಡಿರಿ. ಅವರ ಯೋಜನೆಯು ಮನುಷ್ಯರಿಂದ ಬಂದದ್ದಾಗಿದ್ದರೆ, ಅದು ಉರುಳಿಹೋಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರುವುದರಿಂದ ನಾನು ನಿಮಗೆ ಹೇಳುವುದೇನಂದರೆ ನೀವು ಆ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ. ಏಕೆಂದರೆ ಈ ಯೋಚನೆಯು ಅಥವಾ ಈ ಕೆಲಸವು ಮನುಷ್ಯರಿಂದಾಗಿದ್ದರೆ ತಾನೇ ಕೆಡುವುದು;
Kannada BSI Bible 2016
ಈಗ ನಾನು ನಿಮಗೆ ಹೇಳುವದೇನಂದರೆ--ಈ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ; ಈ ಯೋಚನೆಯು ಅಥವಾ ಈ ಕಾರ್ಯವು ಮನುಷ್ಯರಿಂದಾಗಿದ್ದರೆ ಅದು ನಿಷ್ಫಲವಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರುವದರಿಂದ ನಾನು ನಿಮಗೆ ಹೇಳುವದೇನಂದರೆ ನೀವು ಆ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ; ಯಾಕಂದರೆ ಈ ಯೋಚನೆಯು ಅಥವಾ ಈ ಕೆಲಸವು ಮನುಷ್ಯರಿಂದಾಗಿದ್ದರೆ ತಾನೇ ಕೆಡುವದು;
Kannada Bible (KNCL) BSI 2016
ಆದುದರಿಂದ ನಾನು ನಿಮಗೆ ಹೇಳುವುದೇನೆಂದರೆ: ಈ ವ್ಯಕ್ತಿಗಳ ಗೊಡವೆಗೆ ಹೋಗಬೇಡಿ; ಇವರನ್ನು ಸುಮ್ಮನೆ ಬಿಟ್ಟುಬಿಡಿ. ಇವರ ಯೋಜನೆ ಅಥವಾ ಕಾರ್ಯ ಮಾನವ ಕಲ್ಪಿತವಾಗಿದ್ದರೆ ಅದರಷ್ಟಕ್ಕೆ ಅದೇ ನಾಶವಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ, ಈಗ ನಾನು ನಿಮಗೆ ಹೇಳುವುದೇನೆಂದರೆ, ಈ ಜನರಿಂದ ದೂರವಾಗಿರಿ! ಅವರನ್ನು ಬಿಟ್ಟುಬಿಡಿರಿ! ಏಕೆಂದರೆ ಅವರ ಉದ್ದೇಶ ಅಥವಾ ಕಾರ್ಯವು ಮನುಷ್ಯರಿಂದ ಬಂದದ್ದಾಗಿದ್ದರೆ, ಅದೇ ವ್ಯರ್ಥವಾಗುವುದು.