Acts 5:39 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಅದು ದೇವರಿಂದ ಬಂದದ್ದಾಗಿದ್ದರೆ, ನೀವು ಅವರನ್ನು ತಡೆಯಲು ಸಾಧ್ಯವಾಗುವುದಿಲ್ಲ. ನೀವು ದೇವರಿಗೇ ವಿರುದ್ಧವಾಗಿ ಹೋರಾಡಿದಂತಾದೀತು!” ಎಂದು ಹೇಳಿದನು. ಗಮಲಿಯೇಲನ ಸಲಹೆಗೆ ಯೆಹೂದ್ಯ ನಾಯಕರು ಒಪ್ಪಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ದೇವರಿಂದಾಗಿದ್ದರೆ ಅದನ್ನು ಕೆಡಿಸುವುದಕ್ಕೆ ನಿಮ್ಮಿಂದ ಸಾಧ್ಯವಾಗುವುದಿಲ್ಲ; ನೀವು ಒಂದು ವೇಳೆ ದೇವರ ವಿರುದ್ಧ ಯುದ್ಧಮಾಡುವವರಾಗಿ ಕಾಣಿಸಿಕೊಂಡೀರಿ” ಎಂದು ಹೇಳಿದನು.
Kannada BSI Bible 2016
ಅದು ದೇವರಿಂದಾಗಿದ್ದರೆ ನೀವು ಅದನ್ನು ಗೆಲ್ಲಲಾರಿರಿ; ಒಂದು ವೇಳೆ ನೀವು ದೇವರಿಗೆ ವಿರುದ್ಧ ವಾಗಿ ಹೋರಾಡುವವರಾಗಿ ಕಾಣಿಸಿಕೊಂಡೀರಿ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ದೇವರಿಂದಾಗಿದ್ದರೆ ಅದನ್ನು ಕೆಡಿಸುವದಕ್ಕೆ ನಿಮ್ಮಿಂದ ಆಗುವದಿಲ್ಲ. ನೀವು ಒಂದು ವೇಳೆ ದೇವರ ಮೇಲೆ ಯುದ್ಧಮಾಡುವವರಾಗಿ ಕಾಣಿಸಿಕೊಂಡೀರಿ ಎಂದು ಹೇಳಿದನು.
Kannada Bible (KNCL) BSI 2016
ಇದು ದೈವಸಂಕಲ್ಪವಾಗಿದ್ದರೆ ಅವರನ್ನು ನಾಶಮಾಡಲು ನಿಮ್ಮಿಂದಾಗದು. ನೀವು ದೇವರಿಗೆ ವಿರುದ್ಧ ಹೋರಾಡಿದಂತೆ ಆದೀತು,” ಎಂದು ಹೇಳಿದನು. ಸಭಾಸದಸ್ಯರು ಗಮಲಿಯೇಲನ ಸಲಹೆಯನ್ನು ಅಂಗೀಕರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ವೇಳೆ ಇದು ದೇವರಿಂದ ಬಂದದ್ದಾಗಿದ್ದರೆ, ಅವರನ್ನು ನಿಲ್ಲಿಸಲು ನಿಮ್ಮಿಂದಾಗದು. ಹಾಗೆ ಮಾಡಲು ಪ್ರಯತ್ನಿಸಿದರೆ ನೀವು ದೇವರಿಗೆ ವಿರೋಧವಾಗಿ ಹೋರಾಡುವವರಾಗಿ ಕಂಡು ಬರುವಿರಿ,” ಎಂದು ಹೇಳಿದನು.