Acts 5:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ಜಮೀನನ್ನು ಮಾರುವುದಕ್ಕಿಂತ ಮೊದಲು ಅದು ನಿನ್ನದೇ ಆಗಿತ್ತು. ನೀನು ಮಾರಿದ ಮೇಲೆಯೂ ಬಂದ ಹಣ ನಿನ್ನದೇ ಆಗಿತ್ತು. ಈ ಕೆಟ್ಟಕಾರ್ಯವನ್ನು ಮಾಡಲು ನೀನು ಯಾಕೆ ಯೋಚಿಸಿಕೊಂಡೆ? ನೀನು ಸುಳ್ಳು ಹೇಳಿದ್ದು ದೇವರಿಗೆ, ಮನುಷ್ಯರಿಗಲ್ಲ!” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಆಸ್ತಿ ಮೊದಲು ನಿನ್ನದಾಗಿಯೇ ಇತ್ತಲ್ಲವೇ. ಮಾರಿದ ಮೇಲೆ ಬಂದ ಹಣವು ನಿನ್ನ ಅಧೀನದಲ್ಲೇ ಇತ್ತಲ್ಲವೇ, ನೀನು ಈ ಕಾರ್ಯವನ್ನು ನಿನ್ನ ಹೃದಯದಲ್ಲಿ ಯೋಚಿಸಿಕೊಂಡದ್ದು ಏಕೆ? ನೀನು ಸುಳ್ಳಾಡಿದ್ದು ಮನುಷ್ಯರಿಗಲ್ಲ, ದೇವರಿಗೆ” ಅಂದನು.
Kannada BSI Bible 2016
ಆ ಆಸ್ತಿಯು ಇದ್ದಾಗ ಅದು ನಿನ್ನ ಸ್ವಂತದ್ದಾಗಿತ್ತಲ್ಲವೇ? ಅದನ್ನು ಮಾರಿದ ಮೇಲೆಯೂ ನಿನ್ನ ಅಧೀನದಲ್ಲಿಯೇ ಇತ್ತಲ್ಲವೇ? ನಿನ್ನ ಹೃದಯದಲ್ಲಿ ಅದನ್ನು ಯಾಕೆ ಯೋಚಿಸಿದ್ದೀ? ನೀನು ಮನುಷ್ಯರಿಗಲ್ಲ, ದೇವರಿಗೇ ಸುಳ್ಳಾಡಿದ್ದೀ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಆಸ್ತಿ ಇದ್ದಾಗ ನಿನ್ನದಾಗಿಯೇ ಇತ್ತಲ್ಲವೇ. ಮಾರಿದ ಮೇಲೆಯೂ ಬಂದ ಹಣವು ನಿನ್ನ ಅಧೀನದಲ್ಲೇ ಇತ್ತಲ್ಲವೇ. ನೀನು ಈ ಕಾರ್ಯವನ್ನು ನಿನ್ನ ಹೃದಯದಲ್ಲಿ ಯೋಚಿಸಿಕೊಂಡದ್ದು ಯಾಕೆ? ನೀನು ಸುಳ್ಳಾಡಿದ್ದು ಮನುಷ್ಯರಿಗಲ್ಲ, ದೇವರಿಗೆ ಆಡಿದಿ ಅಂದನು.
Kannada Bible (KNCL) BSI 2016
ಮಾರುವುದಕ್ಕೆ ಮೊದಲು ಆಸ್ತಿ ನಿನಗೇ ಸೇರಿತ್ತು; ಮಾರಿದ ನಂತರವೂ ಅದರ ಹಣ ನಿನ್ನದೇ ಆಗಿತ್ತು. ಹೀಗಿರುವಲ್ಲಿ ಇಂಥಾ ದುಷ್ಟಯೋಚನೆ ಮಾಡಲು ನೀನೇಕೆ ಮನಸ್ಸುಮಾಡಿದೆ? ನೀನು ಸುಳ್ಳಾಡಿರುವುದು ಮನುಷ್ಯರಿಗಲ್ಲ, ದೇವರಿಗೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಾರುವುದಕ್ಕಿಂತ ಮೊದಲು ಅದು ನಿನ್ನ ಅಧೀನದಲ್ಲಿತ್ತಲ್ಲವೇ? ಮಾರಿದ ನಂತರವೂ ಆ ಹಣ ನಿನ್ನ ಅಧೀನದಲ್ಲಿಯೇ ಇತ್ತಲ್ಲವೇ? ಇಂಥ ಕಾರ್ಯ ಮಾಡಲು ನಿನ್ನ ಹೃದಯದಲ್ಲಿ ಯೋಚನೆ ಬಂದದ್ದು ಏಕೆ? ನೀನು ಸುಳ್ಳು ಹೇಳಿದ್ದು ಮನುಷ್ಯರಿಗಲ್ಲ, ದೇವರಿಗೇ,” ಎಂದು ನುಡಿದನು.