Acts 5:42 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಜನರಿಗೆ ಉಪದೇಶಿಸುವುದನ್ನು ನಿಲ್ಲಿಸಲಿಲ್ಲ. ಯೇಸುವೇ ಕ್ರಿಸ್ತನೆಂಬ ಶುಭವಾರ್ತೆಯನ್ನು ಜನರಿಗೆ ಹೇಳುವುದನ್ನು ಮುಂದುವರಿಸಿದರು. ಅವರು ಪ್ರತಿದಿನ ದೇವಾಲಯದಲ್ಲಿಯೂ ಜನರ ಮನೆಗಳಲ್ಲಿಯೂ ಉಪದೇಶಿಸುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಿರೀಸಭೆಯ ಎದುರಿನಿಂದ ಹೊರಟುಹೋಗಿ, ಪ್ರತಿದಿನ ಎಡೆಬಿಡದೆ ದೇವಾಲಯದಲ್ಲಿಯೂ, ಮನೆಮನೆಗಳಲ್ಲಿಯೂ, ಉಪದೇಶಮಾಡುತ್ತಾ ಕ್ರಿಸ್ತನಾದ ಯೇಸುವಿನ ಕುರಿತು ಶುಭವರ್ತಮಾನವನ್ನು ಸಾರುತ್ತಾ ಇದ್ದರು.
Kannada BSI Bible 2016
ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಿರೀಸಭೆಯ ಎದುರಿನಿಂದ ಹೊರಟುಹೋಗಿ ಪ್ರತಿದಿನ ಎಡೆಬಿಡದೆ ದೇವಾಲಯದಲ್ಲಿಯೂ ಮನೆಮನೆಯಲ್ಲಿಯೂ ಉಪದೇಶಮಾಡುತ್ತಾ ಕ್ರಿಸ್ತನಾದ ಯೇಸುವಿನ ವಿಷಯವಾದ ಶುಭವರ್ತಮಾನವನ್ನು ಸಾರುತ್ತಾ ಇದ್ದರು.
Kannada Bible (KNCL) BSI 2016
ಯೇಸುವೇ ಲೋಕೋದ್ಧಾರಕನೆಂದು ಪ್ರತಿದಿನ ದೇವಾಲಯದಲ್ಲೂ ಮನೆಮನೆಗಳಲ್ಲೂ ಉಪದೇಶಿಸುವುದರಲ್ಲಿ ಹಾಗೂ ಸಾರುವುದರಲ್ಲಿ ನಿರತರಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಿನದಿನವೂ ಅವರು ದೇವಾಲಯಗಳಲ್ಲಿ ಮತ್ತು ಮನೆಯಿಂದ ಮನೆಗೆ ಹೋಗಿ ಕ್ರಿಸ್ತ ಯೇಸುವಿನ ಸುವಾರ್ತೆಯನ್ನು ಸಾರುವುದನ್ನೂ ಬೋಧಿಸುವುದನ್ನೂ ನಿಲ್ಲಿಸಲೇ ಇಲ್ಲ.