Acts 5:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸುಮಾರು ಮೂರು ಗಂಟೆಗಳಾದ ನಂತರ ಅವನ ಹೆಂಡತಿಯಾದ ಸಫೈರ ಒಳಗೆ ಬಂದಳು. ನಡೆದ ಸಂಗತಿಯ ಬಗ್ಗೆ ಸಫೈರಳಿಗೆ ಗೊತ್ತಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಾದ ಸುಮಾರು ಮೂರು ಗಂಟೆಗಳ ನಂತರ ಅವನ ಹೆಂಡತಿಯು ನಡೆದ ಸಂಗತಿಯನ್ನು ತಿಳಿಯದೆ ಒಳಗೆ ಬಂದಳು.
Kannada BSI Bible 2016
ಸುಮಾರು ಮೂರು ತಾಸುಗಳಾದ ಮೇಲೆ ಅವನ ಹೆಂಡತಿಯು ನಡೆದ ಸಂಗತಿಯನ್ನು ತಿಳಿಯದೆ ಒಳಗೆ ಬಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸುಮಾರು ಮೂರು ಘಂಟೆ ಹೊತ್ತಿನ ಮೇಲೆ ಅವನ ಹೆಂಡತಿಯು ನಡೆದ ಸಂಗತಿಯನ್ನು ತಿಳಿಯದೆ ಒಳಗೆ ಬಂದಳು.
Kannada Bible (KNCL) BSI 2016
ಸುಮಾರು ಮೂರು ಗಂಟೆಗಳ ನಂತರ ಅವನ ಪತ್ನಿ ಅಲ್ಲಿಗೆ ಬಂದಳು. ಅಲ್ಲಿ ಸಂಭವಿಸಿದ್ದೇನೂ ಆಕೆಗೆ ತಿಳಿದಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏನು ಸಂಭವಿಸಿತೆಂಬುದನ್ನು ತಿಳಿಯದೆ, ಸುಮಾರು ಮೂರು ತಾಸುಗಳ ನಂತರ ಅವನ ಹೆಂಡತಿ ಒಳಗೆ ಪ್ರವೇಶಿಸಿದಳು.