Acts 5:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪೇತ್ರನು ಆಕೆಗೆ, “ನೀನು ಮತ್ತು ನಿನ್ನ ಗಂಡನು ಪ್ರಭುವಿನ ಆತ್ಮನನ್ನು ಪರೀಕ್ಷಿಸಲು ಒಪ್ಪಿಕೊಂಡಿದ್ದೇಕೆ? ಅಗೋ, ನಿನ್ನ ಗಂಡನನ್ನು ಹೂಳಿಟ್ಟ ಜನರು ಬಾಗಿಲ ಬಳಿಗೆ ಬಂದಿದ್ದಾರೆ! ಅವರು ನಿನ್ನನ್ನೂ ಅದೇರೀತಿ ಹೊತ್ತುಕೊಂಡು ಹೋಗುವರು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಪೇತ್ರನು ಆಕೆಗೆ, “ನೀವಿಬ್ಬರೂ ಕರ್ತನ ಆತ್ಮನನ್ನು ಪರೀಕ್ಷಿಸುವುದಕ್ಕೆ ಏಕೆ ಒಡಂಬಟ್ಟಿರಿ? ಅಗೋ, ನಿನ್ನ ಗಂಡನನ್ನು ಸಮಾಧಿಮಾಡಿದವರು ಬಂದು ಬಾಗಿಲಿನಲ್ಲಿ ಕಾಲಿಟ್ಟಿದ್ದಾರೆ, ನಿನ್ನನ್ನೂ ಹೊತ್ತುಕೊಂಡು ಹೋಗುವರು” ಎಂದು ಹೇಳಿದನು.
Kannada BSI Bible 2016
ಆಗ ಪೇತ್ರನು ಆಕೆಗೆ--ಕರ್ತನ ಆತ್ಮನನ್ನು ಶೋಧಿಸುವದಕ್ಕಾಗಿ ನೀವು ಹೇಗೆ ಒಟ್ಟಾಗಿ ಸಮ್ಮತಿಸಿ ದ್ದೀರಿ? ಇಗೋ, ನಿನ್ನ ಗಂಡನನ್ನು ಹೂಣಿಟ್ಟವರ ಪಾದಗಳು ಬಾಗಿಲಲ್ಲಿ ಇವೆ, ಅವರು ನಿನ್ನನ್ನೂ ಹೊತ್ತು ಕೊಂಡು ಹೋಗುವರು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಪೇತ್ರನು ಆಕೆಗೆ - ನೀವಿಬ್ಬರೂ ಕರ್ತನ ಆತ್ಮನನ್ನು ಪರೀಕ್ಷಿಸುವದಕ್ಕೆ ಯಾಕೆ ಒಡಂಬಟ್ಟಿರಿ? ಅಗೋ, ನಿನ್ನ ಗಂಡನನ್ನು ಹೂಣಿಟ್ಟವರು ಬಂದು ಬಾಗಿಲಿನಲ್ಲಿ ಕಾಲಿಟ್ಟಿದ್ದಾರೆ, ನಿನ್ನನ್ನೂ ಹೊತ್ತುಕೊಂಡು ಹೋಗುವರು ಎಂದು ಹೇಳಿದನು.
Kannada Bible (KNCL) BSI 2016
ಪೇತ್ರನು, “ನೀನೂ ನಿನ್ನ ಪತಿಯೂ ಸರ್ವೇಶ್ವರನ ಆತ್ಮವನ್ನು ಪರೀಕ್ಷಿಸಲು ಹವಣಿಸಿದಿರೋ? ಇಗೋ, ನಿನ್ನ ಪತಿಯನ್ನು ಸಮಾಧಿಮಾಡಿಬಂದವರ ಕಾಲಿನ ಸಪ್ಪಳ. ಅವರು ಬಾಗಿಲ ಬಳಿಯಲ್ಲೇ ಇದ್ದಾರೆ. ಅವರು ನಿನ್ನನ್ನೂ ಹೊತ್ತುಕೊಂಡು ಹೋಗುವರು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀವಿಬ್ಬರೂ ಕರ್ತದೇವರ ಆತ್ಮವನ್ನು ಪರೀಕ್ಷಿಸಲು ಒಪ್ಪಿಕೊಂಡದ್ದೇಕೆ? ಇಗೋ! ನಿನ್ನ ಗಂಡನ ಶವವನ್ನು ಹೂಣಿಟ್ಟು ಬಂದವರು ಬಾಗಿಲ ಬಳಿಯಲ್ಲೇ ಇದ್ದಾರೆ. ಅವರು ನಿನ್ನನ್ನೂ ಹೊತ್ತುಕೊಂಡು ಹೋಗುವರು,” ಎಂದು ಆಕೆಗೆ ಪೇತ್ರನು ಹೇಳಿದನು.