Acts 6:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸುವಿನ ಶಿಷ್ಯರ ಸಂಖ್ಯೆಯು ಹೆಚ್ಚುಹೆಚ್ಚಾಗುತ್ತಿತ್ತು. ಆದರೆ ಈ ಸಮಯದಲ್ಲಿ ಗ್ರೀಕ್ ಮಾತಾಡುವ ಶಿಷ್ಯರು ಯೆಹೂದ್ಯ ಶಿಷ್ಯರಿಗೆ ದೂರು ಹೇಳಿದರು. ಪ್ರತಿದಿನ ಶಿಷ್ಯರಿಗೆ ಕೊಡುವಂಥವುಗಳಲ್ಲಿ ತಮ್ಮ ವಿಧವೆಯರಿಗೆ ಅವರ ಪಾಲು ದೊರೆಯುತ್ತಿಲ್ಲವೆಂದು ಅವರು ಆಪಾದಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನಗಳಲ್ಲಿ ಶಿಷ್ಯರು ಹೆಚ್ಚುತ್ತಾ ಬರಲಾಗಿ ಅವರೊಳಗೆ ಗ್ರೀಕ್ ಭಾಷೆಯವರು ಇಬ್ರಿಯ ಭಾಷೆಯವರ ಮೇಲೆ ದೂರು ನೀಡುತ್ತಾ ಅನುದಿನದ ಉಪಚಾರದಲ್ಲಿ ನಮ್ಮ ವಿಧವೆಯರನ್ನು ಸರಿಯಾಗಿ ಪರಾಂಬರಿಸುವುದಿಲ್ಲವೆಂದು ಗೊಣಗುಟ್ಟಿದರು.
Kannada BSI Bible 2016
ಆ ದಿವಸಗಳಲ್ಲಿ ಶಿಷ್ಯರ ಸಂಖ್ಯೆ ಹೆಚ್ಚಾದಾಗ ಪ್ರತಿ ದಿನದ ಉಪಚಾರದಲ್ಲಿ ಗ್ರೀಕರ ವಿಧವೆಯರು ಅಲಕ್ಷ್ಯಮಾಡಲ್ಪಟ್ಟದ್ದರಿಂದ ಇಬ್ರಿಯ ರಿಗೆ ವಿರುದ್ಧವಾಗಿ ಅವರು ಗುಣುಗುಟ್ಟಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿವಸಗಳಲ್ಲಿ ಶಿಷ್ಯರು ಹೆಚ್ಚುತ್ತಾ ಬರಲಾಗಿ ಅವರೊಳಗೆ ಗ್ರೀಕ್‍ಭಾಷೆಯವರು ಇಬ್ರಿಯ ಭಾಷೆಯವರ ಮೇಲೆ - ದಿನದಿನದ ಉಪಚಾರದಲ್ಲಿ ನಮ್ಮ ವಿಧವೆಯರನ್ನು ಸರಿಯಾಗಿ ಪರಾಂಬರಿಸುವದಿಲ್ಲವೆಂದು ಗುಣುಗುಟ್ಟಿದರು.
Kannada Bible (KNCL) BSI 2016
ಇತ್ತ ಭಕ್ತವಿಶ್ವಾಸಿಗಳ ಸಂಖ್ಯೆ ಹೆಚ್ಚುತ್ತಾ ಬಂದಿತು. ಆಗ ಗ್ರೀಕ್ ಮಾತನಾಡುತ್ತಾ ಇದ್ದವರ ಹಾಗೂ ಸ್ಥಳೀಯ ಭಾಷೆ ಮಾತನಾಡುತ್ತಿದ್ದವರ ನಡುವೆ ಬಿನ್ನಾಭಿಪ್ರಾಯ ಉಂಟಾಯಿತು. ದಿನನಿತ್ಯ ಮಾಡುವ ದೀನದಲಿತರ ಸೇವೆಯಲ್ಲಿ ತಮ್ಮ ಕಡೆಯ ವಿಧವೆಯರನ್ನು ಅಲಕ್ಷ್ಯಮಾಡಲಾಗುತ್ತಿದೆ ಎಂದು ಗ್ರೀಕರು ಗೊಣಗುಟ್ಟಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿನಗಳಲ್ಲಿ ಶಿಷ್ಯರ ಸಂಖ್ಯೆ ಹೆಚ್ಚುತ್ತಲೇ ಇತ್ತು. ಅವರಲ್ಲಿ ಗ್ರೀಕ್ ಮಾತನಾಡುವ ಯೆಹೂದ್ಯರು, ಹೀಬ್ರೂ ಭಾಷೆ ಮಾತನಾಡುವ ಯೆಹೂದ್ಯರ ವಿರೋಧವಾಗಿ ಗೊಣಗುಟ್ಟುತ್ತಿದ್ದರು. ಏಕೆಂದರೆ, “ಅನುದಿನದ ಉಪಚಾರದಲ್ಲಿ ಅವರು ತಮ್ಮ ವಿಧವೆಯರನ್ನು ಅಲಕ್ಷ್ಯಮಾಡುತ್ತಿದ್ದಾರೆ,” ಎಂದರು.