Acts 6:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಜರೇತಿನ ಯೇಸು ಈ ದೇವಾಲಯವನ್ನು ಕೆಡವಿ ಮೋಶೆಯ ವಿಧಿಗಳನ್ನು ಬದಲಾಯಿಸುತ್ತಾನೆಂದು ಇವನು ಹೇಳುವುದನ್ನು ನಾವು ಕೇಳಿದ್ದೇವೆ” ಎಂದು ಹೇಳಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ನಜರೇತಿನ ಯೇಸು ಈ ಸ್ಥಳವನ್ನು ನಾಶಮಾಡಿ, ಮೋಶೆ ನಮಗೆ ನೇಮಿಸಿರುವ ಆಚಾರಗಳನ್ನು ಬೇರೆ ಮಾಡುವನೆಂಬುದಾಗಿ ಇವನು ಹೇಳುವುದನ್ನು ನಾವು ಕೇಳಿದ್ದೇವೆ” ಅಂದರು.
Kannada BSI Bible 2016
ನಜ ರೇತಿನ ಯೇಸು ಈ ಸ್ಥಳವನ್ನು (ದೇವಾಲಯವನ್ನು) ಕೆಡವಿ ಮೋಶೆಯು ನಮಗೆ ಒಪ್ಪಿಸಿಕೊಟ್ಟ ಆಚಾರಗಳನ್ನು ಮಾರ್ಪಡಿಸುವನು ಎಂದು ಇವನು ಹೇಳುವದನ್ನು ನಾವು ಕೇಳಿದ್ದೇವೆ ಅಂದರು.ಆಗ ಆಲೋಚನಾ ಸಭೆಯಲ್ಲಿ ಕೂತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲಾಗಿ ಅವನ ಮುಖವು ದೂತನ ಮುಖದಂತೆ ಇರುವದನ್ನು ಕಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ನಜರೇತಿನ ಯೇಸು ಈ ದೇವಾಲಯವನ್ನು ಕೆಡವಿ ಮೋಶೆ ನಮಗೆ ನೇವಿುಸಿರುವ ಆಚಾರಗಳನ್ನು ಬೇರೆ ಮಾಡುವನೆಂಬದಾಗಿ ಇವನು ಹೇಳುವದನ್ನು ನಾವು ಕೇಳಿದ್ದೇವೆ ಅಂದರು.
Kannada Bible (KNCL) BSI 2016
ನಜರೇತಿನ ಆ ಯೇಸು ಈ ಮಹಾದೇವಾಲಯವನ್ನು ನಾಶಗೊಳಿಸುವನೆಂದೂ ಮೋಶೆ ನಮಗೆ ವಿಧಿಸಿದ ಸಂಪ್ರದಾಯಗಳನ್ನು ಬದಲಿಸುವನೆಂದೂ ಇವನು ಹೇಳಿರುತ್ತಾನೆ. ಇದನ್ನು ನಾವು ಕೇಳಿದ್ದೇವೆ,’ ಎಂದು ಹೇಳಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಜರೇತಿನ ಯೇಸು ಈ ಸ್ಥಳವನ್ನು ನಾಶಮಾಡಿಬಿಡುತ್ತಾರೆಂದೂ ನಮಗೆ ಒಪ್ಪಿಸಿದ ಮೋಶೆಯ ಪದ್ಧತಿಗಳನ್ನು ಬದಲಾಯಿಸುತ್ತಾರೆಂದೂ ಇವನು ಹೇಳುವುದನ್ನು ನಾವು ಕೇಳಿದ್ದೇವೆ,” ಎಂದು ಅವನ ವಿರುದ್ಧ ಸಾಕ್ಷಿ ಹೇಳಿಸಿದರು.