Acts 6:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಭೆಯಲ್ಲಿ ಕುಳಿತಿದ್ದವರೆಲ್ಲರೂ ಸ್ತೆಫನನ ಮುಖವನ್ನು ದಿಟ್ಟಿಸಿ ನೋಡಲು ಅವನ ಮುಖವು ದೇವದೂತನ ಮುಖದಂತೆ ಕಂಗೊಳಿಸಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಹಿರೀಸಭೆಯಲ್ಲಿ ಕುಳಿತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲು ಅವನ ಮುಖವು ದೇವದೂತನ ಮುಖದಂತೆ ಇರುವುದನ್ನು ಕಂಡರು.
Kannada BSI Bible 2016
ಆಗ ಆಲೋಚನಾ ಸಭೆಯಲ್ಲಿ ಕೂತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲಾಗಿ ಅವನ ಮುಖವು ದೂತನ ಮುಖದಂತೆ ಇರುವದನ್ನು ಕಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಹಿರೀಸಭೆಯಲ್ಲಿ ಕೂತಿದ್ದವರೆಲ್ಲರು ಅವನನ್ನು ದೃಷ್ಟಿಸಿ ನೋಡಿ ಅವನ ಮುಖವು ದೇವದೂತನ ಮುಖದಂತೆ ಇರುವದನ್ನು ಕಂಡರು.
Kannada Bible (KNCL) BSI 2016
ನ್ಯಾಯಸಭೆಯಲ್ಲಿ ಕುಳಿತಿದ್ದವರೆಲ್ಲರೂ ಅವನ ಮುಖವನ್ನೇ ದಿಟ್ಟಿಸಿ ನೋಡಿದರು. ಅದು ದೇವದೂತನ ಮುಖದಂತೆ ಕಂಗೊಳಿಸಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನ್ಯಾಯಸಭೆಯಲ್ಲಿ ಕುಳಿತುಕೊಂಡಿದ್ದವರೆಲ್ಲರೂ ಸ್ತೆಫನನ ಮುಖವನ್ನೇ ದಿಟ್ಟಿಸಿ ನೋಡುತ್ತಿದ್ದರು. ಅವನ ಮುಖವು ದೇವದೂತನ ಮುಖದಂತೆ ಕಾಣಿಸುತ್ತಿತ್ತು.