Acts 6:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಹನ್ನೆರಡು ಮಂದಿ ಅಪೊಸ್ತಲರು ಇಡೀ ಶಿಷ್ಯಸಮುದಾಯದ ಸಭೆಯನ್ನು ಕರೆದು ಅವರಿಗೆ, “ದೇವರ ವಾಕ್ಯವನ್ನು ಬೋಧಿಸುವುದು ನಮ್ಮ ಕೆಲಸ. ಆದರೆ ಅದು ನಿಂತುಹೋಗುವುದು ಸರಿಯಲ್ಲ! ನಾವು ಜನರಿಗೆ ಊಟವನ್ನು ಒದಗಿಸಲು ಸಹಾಯ ಮಾಡುವುದಕ್ಕಿಂತಲೂ ದೇವರ ವಾಕ್ಯೋಪದೇಶವನ್ನು ಮುಂದುವರಿಸುವುದು ಒಳ್ಳೆಯದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಹನ್ನೆರಡು ಮಂದಿ ಅಪೊಸ್ತಲರು ಶಿಷ್ಯರನ್ನು ಒಟ್ಟುಗೂಡಿಸಿ, “ನಾವು ದೇವರ ವಾಕ್ಯೋಪದೇಶವನ್ನು ಬಿಟ್ಟು ಉಪಚಾರಮಾಡುವುದು ಸರಿಯಲ್ಲವಲ್ಲಾ.
Kannada BSI Bible 2016
ಆಗ ಆ ಹನ್ನೆರಡು ಮಂದಿಯು ಶಿಷ್ಯರ ಸಮೂಹವನ್ನು ತಮ್ಮ ಬಳಿಗೆ ಕರೆದು--ನಾವು ದೇವರ ವಾಕ್ಯವನ್ನು ಬಿಟ್ಟು ಉಪಚಾರ ಮಾಡುವದು ವಿಹಿತವಾದದ್ದಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಹನ್ನೆರಡು ಮಂದಿ ಅಪೊಸ್ತಲರು ಶಿಷ್ಯಮಂಡಲಿಯನ್ನು ಕೂಡಿಸಿ - ನಾವು ದೇವರ ವಾಕ್ಯೋಪದೇಶವನ್ನು ಬಿಟ್ಟು ಉಪಚಾರಮಾಡುತ್ತಿರುವದು ತಕ್ಕದ್ದಲ್ಲವಲ್ಲಾ;
Kannada Bible (KNCL) BSI 2016
ಆಗ ಹನ್ನೆರಡುಮಂದಿ ಪ್ರೇಷಿತರು ಭಕ್ತವಿಶ್ವಾಸಿಗಳ ಸಭೆಯನ್ನು ಕರೆದು, “ನಾವು ದೇವರ ವಾಕ್ಯದ ಬೋಧನೆಯನ್ನು ಅವಗಣಿಸಿ ಊಟೋಪಚಾರಗಳ ಸೇವೆಯಲ್ಲಿ ಮಗ್ನರಾಗಿ ಇರುವುದು ಸರಿಯಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಆ ಹನ್ನೆರಡು ಮಂದಿ ಅಪೊಸ್ತಲರು ಶಿಷ್ಯರನ್ನು ಸೇರಿಸಿ, “ನಾವು ದೇವರ ವಾಕ್ಯ ಬೋಧಿಸುವ ಸೇವೆಯನ್ನು ಕಡೆಗಣಿಸಿ, ಆಹಾರ ವಿತರಣೆಗಾಗಿ ಸಮಯ ಕಳೆಯುತ್ತಿರುವುದು ಸರಿಯಲ್ಲ.