Acts 6:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ, ಸಹೋದರರೇ, ನಿಮ್ಮ ಜನರಲ್ಲಿ ಏಳು ಮಂದಿಯನ್ನು ಆರಿಸಿಕೊಳ್ಳಿರಿ. ಅವರು ಜನರಿಂದ ಒಳ್ಳೆಯವರು ಎನಿಸಿಕೊಂಡವರಾಗಿರಬೇಕು; ಜ್ಞಾನಪೂರ್ಣರಾಗಿರಬೇಕು ಮತ್ತು ಪವಿತ್ರಾತ್ಮಭರಿತರಾಗಿರಬೇಕು. ನಾವು ಅವರಿಗೆ ಈ ಕೆಲಸವನ್ನು ಒಪ್ಪಿಸಿಕೊಡುತ್ತೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಸಹೋದರರೇ, ಪವಿತ್ರಾತ್ಮಭರಿತರೂ, ಜ್ಞಾನಸಂಪನ್ನರೂ ಮತ್ತು ಒಳ್ಳೆಯ ಸಾಕ್ಷಿಯನ್ನುಳಿಸಿಕೊಂಡಿರುವ ಏಳು ಮಂದಿಯನ್ನು ನಿಮ್ಮೊಳಗಿಂದ ನೋಡಿ ಆರಿಸಿಕೊಳ್ಳಿರಿ. ಅವರನ್ನು ಈ ಕೆಲಸಕ್ಕಾಗಿ ನೇಮಿಸುವೆವು.
Kannada BSI Bible 2016
ಆದದರಿಂದ ಸಹೋದರರೇ, ಈ ಕೆಲಸದ ಮೇಲೆ ನಾವು ನೇಮಿಸುವಂತೆ ಪವಿತ್ರಾತ್ಮನಿಂದಲೂ ಜ್ಞಾನ ದಿಂದಲೂ ತುಂಬಿದ ಯಥಾರ್ಥವಾದ ಏಳು ಮಂದಿ ಯನ್ನು ನಿಮ್ಮಲ್ಲಿಂದ ಆರಿಸಿಕೊಳ್ಳಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಸಹೋದರರೇ, ಸಂಭಾವಿತರೂ ಪವಿತ್ರಾತ್ಮಭರಿತರೂ ಜ್ಞಾನಸಂಪನ್ನರೂ ಆಗಿರುವ ಏಳುಮಂದಿಯನ್ನು ನಿಮ್ಮೊಳಗಿಂದ ನೋಡಿ ಆರಿಸಿಕೊಳ್ಳಿರಿ; ಅವರನ್ನು ಈ ಕೆಲಸದ ಮೇಲೆ ನೇವಿುಸುವೆವು.
Kannada Bible (KNCL) BSI 2016
ಆದುದರಿಂದ ಸಹೋದರರೇ, ಪವಿತ್ರಾತ್ಮಭರಿತರೂ ಜ್ಞಾನಸಂಪನ್ನರೂ ಸನ್ಮಾನಿತರೂ ಆಗಿರುವ ಏಳು ವ್ಯಕ್ತಿಗಳನ್ನು ನಿಮ್ಮಿಂದ ಆರಿಸಿಕೊಳ್ಳಿ, ನಾವು ಅವರಿಗೆ ಈ ಜವಾಬ್ದಾರಿಯನ್ನು ವಹಿಸುತ್ತೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಹೋದರರೇ, ನಿಮ್ಮಲ್ಲಿ ಪವಿತ್ರಾತ್ಮಭರಿತರೂ ಜ್ಞಾನವಂತರೂ ಎಂದು ಸಾಕ್ಷಿ ಹೊಂದಿರುವ ಏಳು ಜನರನ್ನು ಆಯ್ಕೆ ಮಾಡಿರಿ. ನಾವು ಅವರನ್ನು ಈ ಕಾರ್ಯಕ್ಕಾಗಿ ನೇಮಿಸುವೆವು.