Acts 6:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಡೀ ಸಮುದಾಯವು ಈ ಆಲೋಚನೆಯನ್ನು ಇಷ್ಟಪಟ್ಟಿತು. ಆದ್ದರಿಂದ ಅವರು ಈ ಏಳು ಮಂದಿಯನ್ನು ಆರಿಸಿಕೊಂಡರು: ಸ್ತೆಫನ (ಮಹಾನಂಬಿಕೆಯುಳ್ಳ ಮತ್ತು ಪವಿತ್ರಾತ್ಮಭರಿತನಾಗಿದ್ದ ಮನುಷ್ಯ), ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ ಮತ್ತು ನಿಕೊಲಾಯ (ಮತಾಂತರ ಹೊಂದಿ ಯೆಹೂದ್ಯನಾಗಿದ್ದ ಇವನು ಅಂತಿಯೋಕ್ಯಕ್ಕೆ ಸೇರಿದವನು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಮಾತು ಸರ್ವರಿಗೂ ಒಳ್ಳೆಯದೆಂದು ತೋಚಿತು. ಅವರು ಪವಿತ್ರಾತ್ಮಭರಿತರೂ, ನಂಬಿಕೆಯಿಂದ ತುಂಬಿದವರೂ ಆದ ಸ್ತೆಫನ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ, ಯೆಹೂದ್ಯ ಮತಾವಲಂಬಿಯಾದ ಅಂತಿಯೋಕ್ಯದ ನಿಕೊಲಾಯ ಎಂಬುವವರನ್ನೂ ಆರಿಸಿಕೊಂಡು ಅಪೊಸ್ತಲರ ಮುಂದೆ ನಿಲ್ಲಿಸಿದರು.
Kannada BSI Bible 2016
ಈ ಮಾತು ಸಮೂಹಕ್ಕೆಲ್ಲಾ ಒಪ್ಪಿಗೆಯಾಯಿತು; ಆಗ ಅವರು ನಂಬಿಕೆಯಿಂದಲೂ ಪವಿತ್ರಾತ್ಮನಿಂದಲೂ ಭರಿತನಾದ ಸ್ತೆಫನನೂ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ ಪರ್ಮೇನ ಮತ್ತು ಯೆಹೂದ್ಯ ಮತಾವಲಂಬಿಯಾದ ಅಂತಿ ಯೋಕ್ಯದ ನಿಕೊಲಾಯ ಎಂಬವರನ್ನೂ ಆರಿಸಿಕೊಂಡು
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಮಾತು ಸರ್ವಮಂಡಲಿಗೆ ಒಳ್ಳೇದೆಂದು ತೋಚಿತು. ಅವರು ಪವಿತ್ರಾತ್ಮಭರಿತನೂ ನಂಬಿಕೆಯಿಂದ ತುಂಬಿದವನೂ ಆದ ಸ್ತೆಫನನನ್ನೂ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ, ಯೆಹೂದ್ಯ ಮತಾವಲಂಬಿಯಾದ ಅಂತಿಯೋಕ್ಯದ ನಿಕೊಲಾಯ ಎಂಬವರನ್ನೂ ಆರಿಸಿಕೊಂಡು ಅಪೊಸ್ತಲರ ಮುಂದೆ ನಿಲ್ಲಿಸಿದರು.
Kannada Bible (KNCL) BSI 2016
ಪ್ರೇಷಿತರ ಈ ಸಲಹೆಯನ್ನು ಇಡೀ ಸಭೆ ಅನುಮೋದಿಸಿತು. ಅಂತೆಯೇ ಅಗಾಧ ವಿಶ್ವಾಸ ಉಳ್ಳವನೂ ಪವಿತ್ರಾತ್ಮಭರಿತನೂ ಆದ ಸ್ತೇಫನ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ ಮತ್ತು ಯೆಹೂದ್ಯ ಮತಾವಲಂಬಿಯಾದ ಅಂತಿಯೋಕ್ಯದ ನಿಕೊಲಾಯ ಎಂಬ ಏಳುಮಂದಿಯನ್ನು ಆರಿಸಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಮಾತು ಇಡೀ ಸಮೂಹಕ್ಕೆ ಮೆಚ್ಚುಗೆಯಾಯಿತು. ಅವರು ಪೂರ್ಣನಂಬಿಕೆಯುಳ್ಳವನೂ ಪವಿತ್ರಾತ್ಮಭರಿತನೂ ಆದ ಸ್ತೆಫನನ್ನು ಆರಿಸಿಕೊಂಡರು; ಅಲ್ಲದೆ ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ ಮತ್ತು ಯೆಹೂದ್ಯ ಮಾರ್ಗ ಅನುಸರಿಸುತ್ತಿದ್ದ ಅಂತಿಯೋಕ್ಯದ ನಿಕೊಲಾಯನನ್ನು ಆಯ್ಕೆಮಾಡಿದರು.