Acts 6:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಕೆಲವು ಯೆಹೂದ್ಯರು ಬಂದು ಅವನೊಂದಿಗೆ ವಾದಿಸಿದರು. ಈ ಯೆಹೂದ್ಯರು ಸಭಾಮಂದಿರಕ್ಕೆ ಸೇರಿದವರು. ಅದಕ್ಕೆ ‘ಬಿಡುಗಡೆ ಹೊಂದಿದವರ ಸಭಾಮಂದಿರ’ ಎಂದು ಕರೆಯುತ್ತಿದ್ದರು. (ಸಿರೇನ್ ಮತ್ತು ಅಲೆಕ್ಸಾಂಡ್ರಿಯದಿಂದ ಬಂದ ಯೆಹೂದ್ಯರಿಗೋಸ್ಕರವಾಗಿಯೂ ಈ ಸಭಾಮಂದಿರವಿತ್ತು.) ಸಿಲಿಸಿಯ ಮತ್ತು ಏಷ್ಯಾದಿಂದ ಬಂದ ಯೆಹೂದ್ಯರೂ ಅವರೊಂದಿಗಿದ್ದರು. ಅವರೆಲ್ಲರೂ ಬಂದು ಅವನೊಂದಿಗೆ ವಾದಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಲಿಬೆರ್ತೀನರೆಂಬವರ ಸಮಾಜಕ್ಕೆ ಸೇರಿದ ಕುರೇನ್ಯದವರು ಮತ್ತು ಅಲೆಕ್ಸಾಂದ್ರಿಯದವರು, ಕಿಲಿಕ್ಯ ಮತ್ತು ಆಸ್ಯ ಸೀಮೆಗಳಿಂದ ಬಂದವರಲ್ಲಿ ಕೆಲವರು ಎದ್ದು ಸ್ತೆಫನನ ಸಂಗಡ ತರ್ಕಮಾಡುತ್ತಾ ಇದ್ದರು.
Kannada BSI Bible 2016
ಆಗ ಲಿಬೆರ್ತೀನ ಎಂಬ ಸಭಾಮಂದಿರದಲ್ಲಿಯೂ ಕುರೇನ್ಯ ಅಲೆಕ್ಸಾಂದ್ರಿಯ ಕಿಲಿಕ್ಯ ಆಸ್ಯದವರ ಸಭಾಮಂದಿರ ದಲ್ಲಿಯೂ ಕೆಲವರು ಎದ್ದು ಸ್ತೆಫನನೊಂದಿಗೆ ತರ್ಕ ಮಾಡುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಲಿಬೆರ್ತೀನರೆಂಬವರ ಸಮಾಜದವರಲ್ಲಿಯೂ ಕುರೇನ್ಯದವರ ಮತ್ತು ಅಲೆಕ್ಸಾಂದ್ರಿಯದವರ ಸಮಾಜದವರಲ್ಲಿಯೂ ಕಿಲಿಕ್ಯ ಆಸ್ಯ ಸೀಮೆಗಳಿಂದ ಬಂದವರ ಸಮಾಜದವರಲ್ಲಿಯೂ ಕೆಲವರು ಎದ್ದು ಸ್ತೆಫನನ ಸಂಗಡ ತರ್ಕಮಾಡುತ್ತಾ ಇರಲು
Kannada Bible (KNCL) BSI 2016
ಆದರೆ ಕೆಲವರು ಸ್ತೇಫನನ ವಿರೋಧಿಗಳಾಗಿದ್ದರು. ಇವರು ‘ಬಿಡುಗಡೆ ಹೊಂದಿದವರು’ ಎಂಬವರ ಪ್ರಾರ್ಥನಾ ಮಂದಿರಕ್ಕೆ ಸೇರಿದವರು. ಸಿರೇನ್ ಮತ್ತು ಅಲೆಕ್ಸಾಂಡ್ರಿಯದಿಂದ ಬಂದ ಯೆಹೂದ್ಯರೂ ಇದರ ಸದಸ್ಯರಾಗಿದ್ದರು. ಇವರೊಡನೆ ಸಿಲಿಸಿಯ ಹಾಗೂ ಏಷ್ಯಾದ ಯೆಹೂದ್ಯರೂ ಸೇರಿ ಸ್ತೇಫನನೊಂದಿಗೆ ತರ್ಕ ಮಾಡತೊಡಗಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ, “ಬಿಡುಗಡೆ ಹೊಂದಿದವರು” ಎಂಬ ಯೆಹೂದ್ಯ ಸಭಾಮಂದಿರಕ್ಕೆ ಸೇರಿದವರಿಂದ ವಿರೋಧ ಉಂಟಾಯಿತು. ಅವರು ಕುರೇನ್ಯ ಅಲೆಕ್ಸಾಂದ್ರಿಯ ಕಿಲಿಕ್ಯ ಮತ್ತು ಏಷ್ಯಾ ಪ್ರಾಂತಗಳಿಂದ ಬಂದ ಯೆಹೂದ್ಯರಾಗಿದ್ದರು. ಅವರು ಸ್ತೆಫನನೊಂದಿಗೆ ತರ್ಕಿಸುವುದಕ್ಕೆ ಪ್ರಾರಂಭಿಸಿದರು.