Acts 7:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಈಜಿಪ್ಟಿನಲ್ಲಿ ಮತ್ತು ಕಾನಾನಿನಲ್ಲಿ ಬರಗಾಲ ಉಂಟಾಯಿತು. ಆಹಾರವಿಲ್ಲದೆ ನಮ್ಮ ಪಿತೃಗಳಿಗೆ ಬಹಳ ಕಷ್ಟವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆಗ ಐಗುಪ್ತ ಮತ್ತು ಕಾನಾನ್ ದೇಶಗಳಲ್ಲಿ ಎಲ್ಲೆಲ್ಲಿಯೂ ಬರಗಾಲ ಬಂದು ಜನರಿಗೆ ಬಹಳ ಸಂಕಟವಾಯಿತು; ಅಲ್ಲಿ ನಮ್ಮ ಪೂರ್ವಿಕರಿಗೆ ಆಹಾರ ಸಿಕ್ಕಲಿಲ್ಲ.
Kannada BSI Bible 2016
ಆಗ ಐಗುಪ್ತ ಮತ್ತು ಕಾನಾನ್ ದೇಶಗಳಲ್ಲಿ ಎಲ್ಲೆಲ್ಲಿಯೂ ಬರ ಬಂದು ದೊಡ್ಡ ಸಂಕಟವಾಯಿತು; ಆಗ ನಮ್ಮ ಪಿತೃ ಗಳಿಗೆ ಆಹಾರಕ್ಕೇನೂ ಸಿಕ್ಕಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಐಗುಪ್ತ ಕಾನಾನ್‍ದೇಶಗಳಲ್ಲಿ ಎಲ್ಲೆಲ್ಲಿಯೂ ಬರ ಬಂದು ದೊಡ್ಡ ಸಂಕಟವಾಯಿತು; ನಮ್ಮ ಪಿತೃಗಳಿಗೆ ಕಾಳುಕಡ್ಡಿ ಸಿಕ್ಕಲಿಲ್ಲ.
Kannada Bible (KNCL) BSI 2016
ಈಜಿಪ್ಟ್ ಹಾಗೂ ಕಾನಾನ್ ದೇಶಗಳಲ್ಲಿ ಕ್ಷಾಮ ತಲೆದೋರಿದಾಗ ಜನರು ಕಷ್ಟಸಂಕಟಗಳಿಗೆ ಒಳಗಾದರು. ನಮ್ಮ ಪೂರ್ವಜರು ಆಹಾರವಿಲ್ಲದೆ ಅವಸ್ಥೆಪಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆ ಕಾಲದಲ್ಲಿ ಈಜಿಪ್ಟ್ ಮತ್ತು ಕಾನಾನ್ ದೇಶಗಳ ಎಲ್ಲಾ ಕಡೆಗಳಲ್ಲಿಯೂ ಕ್ಷಾಮ ಬಂದು ಜನರು ಬಹಳ ಬಾಧೆಪಟ್ಟರು, ನಮ್ಮ ಪಿತೃಗಳಿಗೆ ಆಹಾರ ದೊರೆಯದೇ ಹೋಯಿತು.