Acts 7:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಅವರು ಅಲ್ಲಿಗೆ ಎರಡನೆಯ ಸಲ ಹೋದರು. ಈ ಸಲ, ತಾನು ಯಾರೆಂಬುದನ್ನು ಯೋಸೇಫನು ತನ್ನ ಸಹೋದರರಿಗೆ ತಿಳಿಸಿದನು ಮತ್ತು ಯೋಸೇಫನ ಕುಟುಂಬದ ಬಗ್ಗೆ ಫರೋಹನಿಗೆ ತಿಳಿಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಎರಡನೆಯ ಸಾರಿ ಬಂದಾಗ ಯೋಸೇಫನು ಅಣ್ಣತಮ್ಮಂದಿರಿಗೆ ತನ್ನ ಗುರುತು ಸಿಕ್ಕುವಂತೆ ಮಾಡಿದನು. ಮತ್ತು ಯೋಸೇಫನ ವಂಶವು ಫರೋಹನಿಗೆ ತಿಳಿದು ಬಂದಿತು.
Kannada BSI Bible 2016
ಎರಡನೆಯ ಸಾರಿ ಯೋಸೇ ಫನು ತನ್ನ ಸಹೋದರರಿಗೆ ತನ್ನನ್ನು ತೋರ್ಪಡಿಸಿ ಕೊಂಡನು; ಆಗ ಯೋಸೇಫನ ವಂಶವು ಫರೋಹನಿಗೆ ತಿಳಿಯಬಂತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಎರಡನೆಯ ಸಾರಿ ಬಂದಾಗ ಯೋಸೇಫನು ಅಣ್ಣತಮ್ಮಂದಿರಿಗೆ ತನ್ನ ಗುರುತು ಸಿಕ್ಕುವಂತೆ ಮಾಡಿದನು. ಮತ್ತು ಯೋಸೇಫನ ವಂಶವು ಫರೋಹನಿಗೆ ತಿಳಿಯ ಬಂತು.
Kannada Bible (KNCL) BSI 2016
ಎರಡನೆಯ ಬಾರಿ ಅವರು ಬಂದಾಗ ಜೋಸೆಫನು ತನ್ನ ಗುರುತನ್ನು ಸಹೋದರರಿಗೆ ತಿಳಿಸಿದನು. ಆಗ ಫರೋಹನಿಗೆ ಜೋಸೆಫನ ವಂಶದ ಪರಿಚಯವಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಎರಡನೆಯ ಸಾರಿ ಅಲ್ಲಿಗೆ ಹೋದಾಗ, ಯೋಸೇಫನು ತಾನು ಯಾರೆಂಬುದನ್ನು ತನ್ನ ಸಹೋದರರಿಗೆ ತಿಳಿಸಿದನು. ಆಗ ಯೋಸೇಫನ ಕುಟುಂಬದ ಬಗ್ಗೆ ಫರೋಹನಿಗೆ ಗೊತ್ತಾಯಿತು.