Acts 7:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ, ಯೋಸೇಫನು ತನ್ನ ತಂದೆಯಾದ ಯಾಕೋಬನನ್ನು ಮತ್ತು ಸಂಬಂಧಿಕರನ್ನು (ಅವರೆಲ್ಲರು ಒಟ್ಟಿಗೆ ಎಪ್ಪತ್ತೈದು ಮಂದಿ) ಈಜಿಪ್ಟಿಗೆ ಆಹ್ವಾನಿಸಲು ಕೆಲವು ಜನರನ್ನು ಕಳುಹಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ಯೋಸೇಫನು ತನ್ನ ತಂದೆಯಾದ ಯಾಕೋಬನನ್ನೂ ಮತ್ತು ತನ್ನ ಎಲ್ಲಾ ಬಂಧುಬಳಗವನ್ನೂ ಒಟ್ಟಿಗೆ ಎಪ್ಪತ್ತೈದು ಮಂದಿಯನ್ನು ಐಗುಪ್ತದೇಶಕ್ಕೆ ಕರೆಸಿಕೊಂಡನು.
Kannada BSI Bible 2016
ಆಮೇಲೆ ಯೋಸೇಫನು ತನ್ನ ತಂದೆಯಾದ ಯಾಕೋಬನನ್ನೂ ತನ್ನ ಎಲ್ಲಾ ಬಂಧು ಬಳಗವನ್ನೂ ಒಟ್ಟಿಗೆ ಎಪ್ಪತ್ತೈದು ಮಂದಿಯನ್ನು ಕರೆ ಯಿಸಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಯೋಸೇಫನು ತನ್ನ ತಂದೆಯಾದ ಯಾಕೋಬನನ್ನೂ ತನ್ನ ಎಲ್ಲಾ ಬಂಧುಬಳಗವನ್ನೂ ಒಟ್ಟಿಗೆ ಎಪ್ಪತ್ತೈದು ಮಂದಿಯನ್ನು ಕರೆಯಿಸಿಕೊಳ್ಳಲಾಗಿ ಯಾಕೋಬನು ಐಗುಪ್ತದೇಶಕ್ಕೆ ಇಳಿದುಹೋದನು.
Kannada Bible (KNCL) BSI 2016
ಅನಂತರ ತನ್ನ ತಂದೆ ಯಕೋಬನೂ ಅವನ ಬಂಧುಬಳಗದವರೂ ಈಜಿಪ್ಟಿಗೆ ಬರುವಂತೆ ಜೋಸೆಫನು ಹೇಳಿಕಳುಹಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಾದನಂತರ, ಯೋಸೇಫನು ತನ್ನ ತಂದೆ ಯಾಕೋಬನನ್ನು ಅವನ ಕುಟುಂಬದವರೆಲ್ಲರನ್ನೂ, ಒಟ್ಟು ಎಪ್ಪತ್ತೈದು ಜನರನ್ನು ಕರೆಕಳುಹಿಸಿದನು.