Acts 7:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಅವರ ದೇಹಗಳನ್ನು ಶೇಕೆಮಿಗೆ ಸಾಗಿಸಲಾಯಿತು. ಅಲ್ಲಿಯ ಸಮಾಧಿಯೊಂದರಲ್ಲಿ ಅವರನ್ನು ಹೂಳಲಾಯಿತು. (ಅಬ್ರಹಾಮನು ಹಾಮೋರನ ಗಂಡುಮಕ್ಕಳಿಂದ ಕೊಂಡುಕೊಂಡದ್ದು ಈ ಸಮಾಧಿಯನ್ನೇ. ಅವನು ಅವರಿಗೆ ಬೆಳ್ಳಿಯನ್ನು ಕ್ರಯವಾಗಿ ಕೊಟ್ಟಿದ್ದನು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರನ್ನು ಶೇಕೆಮಿಗೆ ತೆಗೆದುಕೊಂಡು ಹೋಗಿ ಅಲ್ಲಿ ಹಮೋರನ ಮಕ್ಕಳಿಂದ ಅಬ್ರಹಾಮನು ಬೆಳ್ಳಿಯನ್ನು ಕೊಟ್ಟು ಕೊಂಡುಕೊಂಡಿದ್ದ ಸಮಾಧಿಯೊಳಗೆ ಇಟ್ಟರು.
Kannada BSI Bible 2016
ಅವರನ್ನು ಶೇಕೆಮಿಗೆ ತೆಗೆದುಕೊಂಡು ಹೋಗಿ ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ಅಬ್ರಹಾಮನು ಹಣಕೊಟ್ಟು ಕೊಂಡುಕೊಂಡಿದ್ದ ಸಮಾಧಿಯೊಳಗೆ ಇಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರನ್ನು ಶೇಕೆವಿುಗೆ ತೆಗೆದುಕೊಂಡು ಹೋಗಿ ಅಲ್ಲಿ ಹಮೋರನ ಮಕ್ಕಳಿಂದ ಅಬ್ರಹಾಮನು ಬೆಳ್ಳಿಕೊಟ್ಟು ಕೊಂಡುಕೊಂಡಿದ್ದ ಸಮಾಧಿಯೊಳಗೆ ಇಟ್ಟರು.
Kannada Bible (KNCL) BSI 2016
ಅವರ ಅವಶೇಷಗಳನ್ನು ಮರಳಿ ಶೇಕೆಮಿಗೆ ಕೊಂಡೊಯ್ಯಲಾಯಿತು. ಅಲ್ಲಿ ಹಾಮೋರ್ ಎಂಬವನ ಮಕ್ಕಳಿಂದ ಅಬ್ರಹಾಮನು ಕ್ರಯಕ್ಕೆ ಕೊಂಡುಕೊಂಡಿದ್ದ ಸಮಾಧಿಯಲ್ಲಿ ಹೂಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಮೃತಶರೀರವನ್ನು ಶೇಕೆಮಿಗೆ ತಂದರು. ಅಲ್ಲಿ ಹಮೋರನ ಮಕ್ಕಳಿಂದ ಅಬ್ರಹಾಮನು ಕ್ರಯಕೊಟ್ಟು ಕೊಂಡುಕೊಂಡಿದ್ದ ಸಮಾಧಿಯಲ್ಲಿ ಇಟ್ಟರು.