Acts 7:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತಮ್ಮನ್ನು ರಕ್ಷಿಸಲು ದೇವರು ಮೋಶೆಯನ್ನು ಉಪಯೋಗಿಸುತ್ತಿದ್ದಾನೆ ಎಂಬುದಾಗಿ ತನ್ನ ಯೆಹೂದ್ಯ ಸಹೋದರರು ಅರ್ಥಮಾಡಿಕೊಳ್ಳುತ್ತಾರೆ ಎಂದು ಮೋಶೆ ಭಾವಿಸಿಕೊಂಡನು. ಆದರೆ ಅವರು ಅರ್ಥಮಾಡಿಕೊಳ್ಳಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ದೇವರು ತನ್ನ ಕೈಯಿಂದ ಬಿಡುಗಡೆಯನ್ನು ಉಂಟುಮಾಡುತ್ತಾನೆಂಬುದು ತನ್ನ ಸಹೋದರರಿಗೆ ತಿಳಿದುಬರುವುದೆಂದು ಭಾವಿಸಿದನು; ಆದರೆ ಅವರು ಹಾಗೆ ತಿಳಿದುಕೊಳ್ಳಲಿಲ್ಲ.
Kannada BSI Bible 2016
ಯಾಕಂದರೆ ದೇವರು ತನ್ನ ಕೈಯಿಂದ ಬಿಡುಗಡೆಯನ್ನು ಮಾಡುತ್ತಾ ನೆಂಬದು ತನ್ನ ಸಹೋದರರಿಗೆ ತಿಳಿದು ಬರುವದೆಂದು ಭಾವಿಸಿದನು; ಆದರೆ ಅವರು ಹಾಗೆ ತಿಳುಕೊಳ್ಳಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ತನ್ನ ಕೈಯಿಂದ ಬಿಡುಗಡೆಯನ್ನು ಉಂಟುಮಾಡುತ್ತಾನೆಂಬದು ತನ್ನ ಸಹೋದರರಿಗೆ ತಿಳಿದುಬರುವದೆಂದು ಭಾವಿಸಿದನು; ಆದರೆ ಅವರು ಹಾಗೆ ತಿಳುಕೊಳ್ಳಲಿಲ್ಲ.
Kannada Bible (KNCL) BSI 2016
ಸ್ವಜನರ ಬಿಡುಗಡೆಗೆ ದೇವರು ತನ್ನನ್ನು ನೇಮಿಸಿರುವರು; ತನ್ನ ಸ್ವಂತಜನರು ಇದನ್ನು ಅರ್ಥಮಾಡಿಕೊಳ್ಳುವರು ಎಂದು ಮೋಶೆ ಭಾವಿಸಿದ್ದನು. ಆದರೆ, ಅವರು ಅರ್ಥಮಾಡಿಕೊಳ್ಳಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಸ್ವಜನರಿಗೆ ತನ್ನ ಮೂಲಕವಾಗಿ ಬಿಡುಗಡೆಯನ್ನು ಕೊಡುವನೆಂದು ಅವರು ಅರ್ಥ ಮಾಡಿಕೊಳ್ಳುವರೆಂದು ಮೋಶೆ ಭಾವಿಸಿದ್ದನು. ಸ್ವಜನರೋ, ಇದನ್ನು ಅರ್ಥಮಾಡಿಕೊಳ್ಳಲಿಲ್ಲ.