Acts 7:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಮರುದಿನ, ಇಬ್ಬರು ಯೆಹೂದ್ಯರು ಹೊಡೆದಾಡುವುದನ್ನು ಮೋಶೆಯು ಕಂಡನು. ಅವರನ್ನು ಸಮಾಧಾನಪಡಿಸಲು ಅವನು ಪ್ರಯತ್ನಿಸಿ ‘ಗೆಳೆಯರೇ, ನೀವು ಸಹೋದರರಾಗಿದ್ದೀರಿ! ನೀವು ಒಬ್ಬರಿಗೊಬ್ಬರು ಅನ್ಯಾಯ ಮಾಡುವುದೇಕೆ? ಎಂದು ಅವರನ್ನು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮರುದಿನ ತಾವು ತಾವೇ ಹೊಡೆದಾಡಿಕೊಳ್ಳುತ್ತಿರುವಾಗ ಅವನು ಅವರಿಗೆ ಎದುರಾಗಿ ಬಂದು, ‘ಜನರೇ, ನೀವು ಸಹೋದರರಲ್ಲವೇ, ನೀವೇಕೆ ಒಬ್ಬರಿಗೊಬ್ಬರು ಅನ್ಯಾಯ ಮಾಡುತ್ತೀರಿ?’ ಎಂದು ಹೇಳಿ ಅವರನ್ನು ಸಮಾಧಾನ ಪಡಿಸಲು ಬಂದನು.
Kannada BSI Bible 2016
ಮರುದಿನ ತಾವು ಹೊಡೆದಾಡಿ ಕೊಳ್ಳುತ್ತಿರುವಾಗ ಅವನು ಕಾಣಿಸಿಕೊಂಡು--ಅಯ್ಯಗಳಿರಾ, ನೀವು ಸಹೋದರರಲ್ಲವೇ; ನೀವೇಕೆ ಒಬ್ಬರಿಗೊಬ್ಬರು ಅನ್ಯಾ ಯಮಾಡುತ್ತೀರಿ ಎಂದು ಹೇಳಿ ಅವರನ್ನು ಸಮಾಧಾನ ಪಡಿಸಬೇಕೆಂದಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮರುದಿನ ತಾವು ತಾವೇ ಹೊಡೆದಾಡಿಕೊಳ್ಳುತ್ತಿರುವಾಗ ಅವನು ಎದುರಾಗಿ ಬಂದು - ಜನರೇ, ನೀವು ಸಹೋದರರಲ್ಲವೇ? ನೀವೇಕೆ ಒಬ್ಬರಿಗೊಬ್ಬರು ಅನ್ಯಾಯಮಾಡುತ್ತೀರಿ ಎಂದು ಹೇಳಿ ಅವರನ್ನು ಸಮಾಧಾನಪಡಿಸಬೇಕೆಂದಿದ್ದನು.
Kannada Bible (KNCL) BSI 2016
ಮಾರನೆಯ ದಿನ ಇಬ್ಬರು ಇಸ್ರಯೇಲರೇ ಜಗಳವಾಡುತ್ತಿರುವುದನ್ನು ಕಂಡನು. ಮೋಶೆ ಅವರನ್ನು ಸಮಾಧಾನಗೊಳಿಸಲು ಪ್ರಯತ್ನಿಸಿದನು. ಅವರಿಗೆ, ‘ಗೆಳೆಯರೇ, ನೀವು ಸಹೋದರರಲ್ಲವೆ? ಹೀಗೇಕೆ ಕಿತ್ತಾಡುತ್ತಿದ್ದೀರಿ?’ ಎಂದು ಸಮಾಧಾನ ಪಡಿಸಲು ಯತ್ನಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮರುದಿನ ಇಬ್ಬರು ಇಸ್ರಾಯೇಲರು ಜಗಳವಾಡುತ್ತಿರುವುದನ್ನು ಮೋಶೆ ಕಂಡು, ‘ಗೆಳೆಯರೇ, ನೀವು ಸಹೋದರರಲ್ಲವೇ; ಒಬ್ಬರಿಗೊಬ್ಬರು ಏಕೆ ಜಗಳಮಾಡುತ್ತಿದ್ದೀರಿ?’ ಎಂದು ಹೇಳಿ ಅವರನ್ನು ಸಮಾಧಾನಪಡಿಸಲು ಯತ್ನಿಸಿದನು.