Acts 7:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಲವತ್ತು ವರ್ಷಗಳಾದ ಮೇಲೆ ಮೋಶೆಯು ಸಿನಾಯ್ ಬೆಟ್ಟದ ಸಮೀಪದಲ್ಲಿರುವ ಮರಳುಗಾಡಿನಲ್ಲಿದ್ದಾಗ ಉರಿಯುತ್ತಿದ್ದ ಪೊದೆಯ ಜ್ವಾಲೆಯಲ್ಲಿ ದೇವದೂತನೊಬ್ಬನು ಕಾಣಿಸಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಲವತ್ತು ವರ್ಷ ತುಂಬಿದ ಮೇಲೆ ದೇವದೂತನು ಸೀನಾಯಿಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಅವನಿಗೆ ಕಾಣಿಸಿಕೊಂಡನು.
Kannada BSI Bible 2016
ನಾಲ್ವತ್ತು ವರುಷ ತುಂಬಿದ ಮೇಲೆ ಸೀನಾಯಿ ಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾಲ್ವತ್ತು ವರುಷ ತುಂಬಿದ ಮೇಲೆ ದೇವದೂತನು ಸೀನಾಯಿಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಅವನಿಗೆ ಕಾಣಿಸಿಕೊಂಡನು.
Kannada Bible (KNCL) BSI 2016
“ನಾಲ್ವತ್ತು ವರ್ಷಗಳಾದ ಮೇಲೆ ಒಂದು ದಿನ ಸೀನಾಯಿ ಬೆಟ್ಟದ ಮರಳುಗಾಡಿನಲ್ಲಿ ಉರಿಯುತ್ತಿದ್ದ ಪೊದೆಯೊಂದನ್ನು ಮೋಶೆ ಕಂಡನು. ಅದರಲ್ಲಿ ಒಬ್ಬ ದೇವದೂತನು ಕಾಣಿಸಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಲವತ್ತು ವರ್ಷಗಳು ಗತಿಸಿದ ತರುವಾಯ ಸೀನಾಯಿ ಪರ್ವತದ ಮರುಭೂಮಿಯಲ್ಲಿ ಉರಿಯುವ ಪೊದೆಯಲ್ಲಿ ದೇವದೂತನೊಬ್ಬನು ಮೋಶೆಗೆ ದರ್ಶನ ಕೊಟ್ಟನು.