Acts 7:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಮೋಶೆಯು ಜನರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ಅವನು ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಈಜಿಪ್ಟಿನಲ್ಲಿಯೂ ಕೆಂಪುಸಮುದ್ರದಲ್ಲಿಯೂ ಮತ್ತು ನಲವತ್ತು ವರ್ಷಗಳ ಕಾಲ ಅರಣ್ಯದಲ್ಲಿಯೂ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನೇ ಐಗುಪ್ತ ದೇಶದಲ್ಲಿಯೂ, ಕೆಂಪು ಸಮುದ್ರದಲ್ಲಿಯೂ, ನಲವತ್ತು ವರ್ಷ ಮರುಭೂಮಿಯಲ್ಲಿಯೂ, ಅದ್ಭುತಕಾರ್ಯಗಳನ್ನೂ ಸೂಚಕ ಕಾರ್ಯಗಳನ್ನೂ ಮಾಡುತ್ತಾ ಅವರನ್ನು ನಡೆಸಿಕೊಂಡು ಬಂದನು.
Kannada BSI Bible 2016
ಅವನು ಐಗುಪ್ತದೇಶದಲ್ಲಿಯೂ ಕೆಂಪು ಸಮುದ್ರ ದಲ್ಲಿಯೂ ನಾಲ್ವತ್ತು ವರುಷ ಅಡವಿಯಲ್ಲಿಯೂ ಅದ್ಭುತ ಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡಿದ ಮೇಲೆ ಅವರನ್ನು ನಡೆಸಿಕೊಂಡು ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನೇ ಐಗುಪ್ತದೇಶದಲ್ಲಿಯೂ ಕೆಂಪು ಸಮುದ್ರದಲ್ಲಿಯೂ ನಾಲ್ವತ್ತು ವರುಷ ಅಡವಿಯಲ್ಲಿಯೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡುತ್ತಾ ಅವರನ್ನು ನಡಿಸಿಕೊಂಡು ಬಂದವನು.
Kannada Bible (KNCL) BSI 2016
ಈಜಿಪ್ಟಿನಲ್ಲೂ ಕೆಂಪುಸಮುದ್ರದಲ್ಲೂ ನಲವತ್ತು ವರ್ಷಕಾಲ ಮರಳು ಬೆಂಗಾಡಿನಲ್ಲೂ ಅದ್ಭುತಗಳನ್ನು ಹಾಗೂ ಸೂಚಕಕಾರ್ಯಗಳನ್ನು ಮಾಡಿ ಇಸ್ರಯೇಲರನ್ನು ಬಿಡುಗಡೆಮಾಡಿದವನು ಇವನೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಮೋಶೆಯೇ ಇಸ್ರಾಯೇಲರನ್ನು ಈಜಿಪ್ಟಿನಿಂದ ಹೊರಗೆ ನಡೆಸಿಕೊಂಡು ಬಂದನು. ಈಜಿಪ್ಟಿನಲ್ಲಿ, ಕೆಂಪುಸಮುದ್ರದ ಬಳಿಯಲ್ಲಿ, ಅರಣ್ಯದಲ್ಲಿ ಅದ್ಭುತಗಳನ್ನು ಮತ್ತು ಸೂಚಕಕಾರ್ಯಗಳನ್ನು ಮಾಡುತ್ತಾ ನಲವತ್ತು ವರ್ಷಗಳ ಕಾಲ ನಡೆಸಿದನು.