Acts 7:37 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಈ ಮೋಶೆಯೇ ಯೆಹೂದ್ಯ ಜನರಿಗೆ, ‘ದೇವರು ನಿಮಗೊಬ್ಬ ಪ್ರವಾದಿಯನ್ನು ಕೊಡುವನು. ಆ ಪ್ರವಾದಿಯು ನಿಮ್ಮ ಸ್ವಜನರ ಮಧ್ಯದಿಂದಲೇ ಬರುವನು. ಅವನು ನನ್ನಂತೆಯೇ ಇರುವನು’ ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆ ಮೋಶೆಯೇ, ‘ದೇವರು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮ್ಮೊಳಗೆ ಎಬ್ಬಿಸುವನು’ ಎಂದು ಇಸ್ರಾಯೇಲ್ ಜನರಿಗೆ ಹೇಳಿದನು.
Kannada BSI Bible 2016
ನಿಮ್ಮ ದೇವರಾದ ಕರ್ತನು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಒಬ್ಬ ಪ್ರವಾದಿಯನ್ನು ನಿಮ ಗಾಗಿ ಎಬ್ಬಿಸುವನು; ನೀವು ಆತನ ಮಾತಿಗೆ ಕಿವಿಗೊಡ ಬೇಕೆಂದು ಇಸ್ರಾಯೇಲ್ ಜನರಿಗೆ ಹೇಳಿದ ಆ ಮೋಶೆಯು ಇವನೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಮೋಶೆಯೇ - ದೇವರು ನನ್ನನ್ನು ಏರ್ಪಡಿಸಿದಂತೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮಗೆ ಏರ್ಪಡಿಸಿಕೊಡುವನು ಎಂದು ಇಸ್ರಾಯೇಲ್ ಜನರಿಗೆ ಹೇಳಿದವನು.
Kannada Bible (KNCL) BSI 2016
‘ದೇವರು ನನ್ನನ್ನು ಕಳುಹಿಸಿದಂತೆ, ನಿಮ್ಮ ಜನಾಂಗದಿಂದಲೇ ಒಬ್ಬ ಪ್ರವಾದಿಯನ್ನು ಕಳುಹಿಸುವರು’ ಎಂದು ಇಸ್ರಯೇಲರಿಗೆ ತಿಳಿಸಿದವನು ಈ ಮೋಶೆಯೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನನ್ನಂಥ ಒಬ್ಬ ಪ್ರವಾದಿಯನ್ನು ನಿಮ್ಮ ಸ್ವಂತ ಜನರೊಳಗಿಂದಲೇ ದೇವರು ನಿಮಗೆ ಕಳುಹಿಸುವರು,’ ಎಂದು ಇಸ್ರಾಯೇಲರಿಗೆ ಹೇಳಿದವನು ಈ ಮೋಶೆಯೇ.