Acts 7:38 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅರಣ್ಯದಲ್ಲಿ ಯೆಹೂದ್ಯರ ಸಮೂಹದೊಂದಿಗೆ ಇದ್ದವನು ಈ ಮೋಶೆಯೇ. ಸಿನಾಯ್ ಬೆಟ್ಟದ ಬಳಿ ತನ್ನೊಂದಿಗೆ ಮಾತಾಡಿದ ದೇವದೂತನೊಂದಿಗೆ ಅವನಿದ್ದನು. ಅಲ್ಲದೆ ಅವನು ನಮ್ಮ ಪಿತೃಗಳೊಂದಿಗೆ ಇದ್ದನು. ಜೀವಕರವಾದ ಆಜ್ಞೆಗಳನ್ನು ಮೋಶೆಯು ದೇವರಿಂದ ಸ್ವೀಕರಿಸಿಕೊಂಡು ಅವುಗಳನ್ನು ನಮಗೆ ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನೇ ಸೀನಾಯಿಬೆಟ್ಟದಲ್ಲಿ, ತನ್ನೊಡನೆ ಮಾತನಾಡಿದ ದೇವದೂತನಿಗೂ ನಮ್ಮ ಪೂರ್ವಿಕರಿಗೂ ಅಡವಿಯಲ್ಲಿದ್ದ ಸಭೆಯೊಳಗೆ ಇದ್ದು ಜೀವಕರವಾದ ದೈವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು ಆಗಿದ್ದಾನೆ.
Kannada BSI Bible 2016
ಇವನೇ ಸೀನಾಯಿ ಬೆಟ್ಟದಲ್ಲಿ ತನ್ನೊಡನೆಯೂ ಪಿತೃಗಳೊಡನೆಯೂ ಮಾತನಾಡಿದ ದೂತನೊಂದಿಗೆ ಅಡವಿಯಲ್ಲಿದ್ದ ಸಭೆ ಯಲ್ಲಿದ್ದುಕೊಂಡು ಜೀವಕರವಾದ ದೇವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನೇ ಸೀನಾಯಿಬೆಟ್ಟದಲ್ಲಿ ತನ್ನೊಡನೆ ಮಾತಾಡಿದ ದೂತನಿಗೂ ನಮ್ಮ ಪಿತೃಗಳಿಗೂ ಅಡವಿಯಲ್ಲಿದ್ದ ಸಭೆಯೊಳಗೆ ಮಧ್ಯಸ್ಥನಾಗಿದ್ದು ಜೀವಕರವಾದ ದೇವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು.
Kannada Bible (KNCL) BSI 2016
ಇಸ್ರಯೇಲರು ಮರಳುಗಾಡಿನಲ್ಲಿ ಸಭೆಸೇರಿದ್ದಾಗ, ಅವರ ಮಧ್ಯೆ ಇದ್ದು, ಸೀನಾಯಿ ಬೆಟ್ಟದಲ್ಲಿ ಮಾತನಾಡಿದ ದೇವದೂತನೊಡನೆಯೂ ನಮ್ಮ ಪಿತೃಗಳೊಡನೆಯೂ ಸಂಭಾಷಿಸಿದವನು ಇವನೇ. ನಮಗೀಯಲು ಜೀವೋಕ್ತಿಗಳನ್ನು ದೇವರಿಂದ ಪಡೆದವನು ಇವನೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವನು ಇಸ್ರಾಯೇಲರು ಅರಣ್ಯದಲ್ಲಿ ದೊಡ್ಡಗುಂಪಾಗಿದ್ದಾಗ ಅವರ ಮಧ್ಯದಲ್ಲಿದ್ದವನು. ಸೀನಾಯಿ ಬೆಟ್ಟದ ಮೇಲೆ ಅವನೊಂದಿಗೆ ಮಾತನಾಡಿದ ದೇವದೂತನೊಂದಿಗಿದ್ದವನು. ಇವನು ನಮ್ಮ ಪಿತೃಗಳೊಂದಿಗೂ ಮಧ್ಯಸ್ಥನಾಗಿ ಇದ್ದವನು. ನಮಗೆ ಕೊಡುವುದಕ್ಕಾಗಿ ಜೀವ ವಾಕ್ಯಗಳನ್ನು ಸ್ವೀಕರಿಸಿದವನು ಈ ಮೋಶೆಯೇ.