Acts 7:39 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆದರೆ ಮೋಶೆಗೆ ವಿಧೇಯರಾಗಲು ನಮ್ಮ ಪಿತೃಗಳಿಗೆ ಇಷ್ಟವಿರಲಿಲ್ಲ. ಅವರು ಅವನನ್ನು ತಿರಸ್ಕರಿಸಿ, ಈಜಿಪ್ಟಿಗೆ ಹಿಂತಿರುಗಬೇಕೆಂದಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆದರೆ ನಮ್ಮ ಪೂರ್ವಿಕರು ಅವನ ಮಾತುಗಳನ್ನು ಕೇಳುವುದಕ್ಕೆ ಮನಸ್ಸಿಲ್ಲದೆ ಅವನನ್ನು ತಳ್ಳಿಬಿಟ್ಟು, ಪುನಃ ಐಗುಪ್ತದೇಶದ ಕಡೆಗೆ ಮನಸ್ಸಿಟ್ಟರು.
Kannada BSI Bible 2016
ಆದರೆ ನಮ ಪಿತೃಗಳು ಅವನ ಮಾತುಗಳಿಗೆ ವಿಧೇಯರಾಗದೆ ಅವನನ್ನು ತಳ್ಳಿಬಿಟ್ಟು ತಮ್ಮ ಹೃದಯಗಳಲ್ಲಿ ಹಿಂದಕ್ಕೆ ಐಗುಪ್ತದ ಕಡೆಗೆ ತಿರುಗಿಕೊಂಡು
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನಮ್ಮ ಪಿತೃಗಳು ಅವನ ಮಾತುಗಳನ್ನು ಕೇಳುವದಕ್ಕೆ ಮನಸ್ಸಿಲ್ಲದವರಾಗಿ ಅವನನ್ನು ತಳ್ಳಿ ಬಿಟ್ಟು ತಿರಿಗಿ ಐಗುಪ್ತದೇಶದ ಕಡೆಗೆ ಮನಸ್ಸಿಟ್ಟರು.
Kannada Bible (KNCL) BSI 2016
“ಆದರೆ ನಮ್ಮ ಪಿತೃಗಳು ಅವನಿಗೆ ವಿಧೇಯರಾಗಲು ನಿರಾಕರಿಸಿದರು. ಅವನನ್ನು ತಿರಸ್ಕರಿಸಿ ಈಜಿಪ್ಟ್ ದೇಶಕ್ಕೆ ಹಿಂದಿರುಗಲು ಮನಸ್ಸು ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೆ ನಮ್ಮ ಪಿತೃಗಳು ಅವನಿಗೆ ವಿಧೇಯರಾಗಲು ಒಪ್ಪಿಕೊಳ್ಳಲಿಲ್ಲ. ಅದಕ್ಕೆ ಬದಲಾಗಿ ಅವರು ಅವನನ್ನು ತಿರಸ್ಕರಿಸಿ, ತಮ್ಮ ಹೃದಯಗಳಲ್ಲಿ ಈಜಿಪ್ಟ್ ದೇಶಕ್ಕೆ ಹಿಂದಿರುಗಿ ಹೋಗಬೇಕೆಂದಿದ್ದರು.