Acts 7:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆದ್ದರಿಂದ ಅಬ್ರಹಾಮನು ಖಾಲ್ದೆಯ ದೇಶವನ್ನು ಬಿಟ್ಟು ಹಾರಾನಿನಲ್ಲಿ ವಾಸಿಸಲು ಹೋದನು. ಅಬ್ರಹಾಮನ ತಂದೆ ಸತ್ತಮೇಲೆ ದೇವರು ಅವನನ್ನು ಈಗ ನೀವು ವಾಸಿಸುತ್ತಿರುವ ಈ ಸ್ಥಳಕ್ಕೆ ಕಳುಹಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆಗ ಅವನು ಕಲ್ದೀಯರ ದೇಶದಿಂದ ಹೊರಟುಹೋಗಿ, ಖಾರಾನಿನಲ್ಲಿ ವಾಸವಾಗಿದ್ದನು. ಅವನ ತಂದೆ ಸತ್ತಮೇಲೆ, ದೇವರು ಅವನನ್ನು ಅಲ್ಲಿಂದ ನೀವು ಈಗ ವಾಸವಾಗಿರುವ ಈ ದೇಶಕ್ಕೆ ಬರಮಾಡಿದನು.
Kannada BSI Bible 2016
ಆಗ ಅಬ್ರಹಾಮನು ಕಲ್ದೀಯರ ದೇಶದೊಳಗಿಂದ ಬಂದು ಖಾರಾನಿನಲ್ಲಿ ವಾಸಮಾಡಿದನು; ತನ್ನ ತಂದೆಯು ಸತ್ತಮೇಲೆ ಅವನು ಅಲ್ಲಿಂದ ಹೊರಟು ನೀವು ಈಗ ವಾಸವಾಗಿರುವ ಈ ದೇಶಕ್ಕೆ ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವನು ಕಸ್ದೀಯರ ದೇಶದಿಂದ ಹೊರಟುಹೋಗಿ ಖಾರಾನಿನಲ್ಲಿ ವಾಸವಾಗಿದ್ದನು. ಅವನ ತಂದೆ ಸತ್ತಮೇಲೆ ದೇವರು ಅವನನ್ನು ಅಲ್ಲಿಂದ ನೀವು ಈಗ ವಾಸವಾಗಿರುವ ಈ ದೇಶಕ್ಕೆ ಬರಮಾಡಿದನು.
Kannada Bible (KNCL) BSI 2016
ಅಂತೆಯೇ ಅವನು ಕಸ್ದೀಯರ ನಾಡನ್ನು ಬಿಟ್ಟು ಹಾರಾನಿನಲ್ಲಿ ವಾಸಮಾಡಿದನು; ಅವನ ತಂದೆಯ ಮರಣಾನಂತರ ದೇವರು ಅವನನ್ನು ನೀವು ವಾಸಮಾಡುತ್ತಿರುವ ಈ ನಾಡಿಗೆ ಕರೆತಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅದರಂತೆ ಅಬ್ರಹಾಮನು ಕಸ್ದೀಯರ ನಾಡನ್ನು ಬಿಟ್ಟು ಹಾರಾನಿನಲ್ಲಿ ಬಂದು ನೆಲೆಸಿದನು. ಅವನ ತಂದೆಯ ಮರಣದ ನಂತರ ನೀವು ಈಗ ವಾಸಿಸುತ್ತಿರುವ ಈ ನಾಡಿಗೆ ದೇವರು ಅವನನ್ನು ಬರಮಾಡಿದರು.