Acts 7:40 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಮ್ಮ ಪಿತೃಗಳು ಆರೋನನಿಗೆ, ‘ಮೋಶೆಯು ನಮ್ಮನ್ನು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದನು. ಆದರೆ ಅವನಿಗೆ ಏನಾಯಿತೋ ನಮಗೆ ಗೊತ್ತಿಲ್ಲ. ಆದ್ದರಿಂದ ನಮ್ಮ ಮುಂದೆ ಹೋಗಲು ಮತ್ತು ನಮ್ಮನ್ನು ನಡೆಸಲು ಕೆಲವು ದೇವರುಗಳನ್ನು ಮಾಡು’ ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಅವರು ಆರೋನನಿಗೆ, ‘ಐಗುಪ್ತ ದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ, ಆದುದರಿಂದ ನಮಗೆ ಮುಂದಾಗಿ ಹೋಗುವುದಕ್ಕೆ ದೇವರುಗಳನ್ನು ನಮಗೆ ಮಾಡಿಕೊಡು’ ಎಂದು ಕೇಳಿಕೊಂಡರು.
Kannada BSI Bible 2016
ಅವರು ಆರೋನ ನಿಗೆ--ಐಗುಪ್ತದೇಶದಿಂದ ನಮ್ಮನ್ನು ಕರಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ; ಆದದರಿಂದ ನಮ್ಮ ಮುಂದುಗಡೆಯಲ್ಲಿ ಹೋಗುವದಕ್ಕೆ ದೇವರು ಗಳನ್ನು ನಮಗೆ ಮಾಡಿಕೊಡು ಎಂದು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಆರೋನನಿಗೆ - ಐಗುಪ್ತದೇಶದಿಂದ ನಮ್ಮನ್ನು ಕರಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ, ನಮ್ಮ ಮುಂದುಗಡೆಯಲ್ಲಿ ಹೋಗುವದಕ್ಕೆ ದೇವರುಗಳನ್ನು ನಮಗೆ ಮಾಡಿಕೊಡು ಎಂದು ಹೇಳಿದರು.
Kannada Bible (KNCL) BSI 2016
ಅವರು ಆರೋನನಿಗೆ, ‘ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದ ಆ ಮೋಶೆಗೆ ಏನಾಯಿತೋ ತಿಳಿಯದು. ನಮಗೆ ಮುಂದಾಳಾಗಿ ಹೋಗಲು ಕೆಲವು ದೇವರುಗಳ ವಿಗ್ರಹಗಳನ್ನು ಮಾಡಿಕೊಡು,’ ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಆರೋನನಿಗೆ, ‘ನಮಗೆ ಮುಂದಾಗಿ ಹೋಗುವುದಕ್ಕಾಗಿ ನಮಗೆ ದೇವರುಗಳನ್ನು ಮಾಡಿಕೊಡು, ನಮ್ಮನ್ನು ಈಜಿಪ್ಟ್ ದೇಶದಿಂದ ಹೊರಗೆ ಕರೆದುಕೊಂಡು ಬಂದ ಆ ಮೋಶೆಗೆ ಏನಾಯಿತೋ ತಿಳಿಯದು,’ ಎಂದರು.