Acts 7:41 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಆ ಜನರು ಕರುವಿನಾಕೃತಿಯಲ್ಲಿ ಒಂದು ವಿಗ್ರಹವನ್ನು ಮಾಡಿ, ಅದಕ್ಕೆ ಯಜ್ಞಗಳನ್ನು ಅರ್ಪಿಸಿದರು. ಆ ಜನರು ತಮ್ಮ ಕೈಯಾರೆ ಮಾಡಿಕೊಂಡ ವಿಗ್ರಹದ ವಿಷಯದಲ್ಲಿ ಬಹು ಸಂತೋಷಪಟ್ಟರು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನಗಳಲ್ಲಿ ಅವರು ಒಂದು ಬಸವನನ್ನು ಮಾಡಿ ಆ ವಿಗ್ರಹಕ್ಕೆ ಬಲಿಯನ್ನು ಅರ್ಪಿಸಿ ತಮ್ಮ ಕೈಗಳಿಂದ ನಿರ್ಮಿಸಿದ ವಸ್ತುವಿನಲ್ಲಿ ಉಲ್ಲಾಸ ಪಟ್ಟರು.
Kannada BSI Bible 2016
ಆ ದಿನಗಳಲ್ಲಿ ಅವರು ಒಂದು ಬಸವನನ್ನು ಮಾಡಿ ಆ ವಿಗ್ರಹಕ್ಕೆ ಬಲಿಯನ್ನರ್ಪಿಸಿ ತಮ್ಮ ಸ್ವಂತ ಕೈಗಳಿಂದ ಮಾಡಿದ ಕೆಲಸಗಳಲ್ಲಿ ಉಲ್ಲಾಸಪಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿನಗಳಲ್ಲಿ ಅವರು ಒಂದು ಬಸವನನ್ನು ಮಾಡಿ ಆ ವಿಗ್ರಹಕ್ಕೆ ಬಲಿಯನ್ನರ್ಪಿಸಿ ತಮ್ಮ ಕೈಗಳಿಂದ ಮಾಡಿದ ವಸ್ತುಗಳಲ್ಲಿ ಉಲ್ಲಾಸಪಟ್ಟರು.
Kannada Bible (KNCL) BSI 2016
ಮಾತ್ರವಲ್ಲ, ಹೋರಿಕರುವಿನ ಆಕಾರದ ವಿಗ್ರಹವೊಂದನ್ನು ಮಾಡಿ ಅದಕ್ಕೆ ಬಲಿಯನ್ನು ಕೊಟ್ಟು, ತಮ್ಮ ಕೈಕೃತಿಗಳಿಗಾಗಿ ಮೆರೆದಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಸಮಯದಲ್ಲಿ ಅವರು ಕರುವಿನ ರೂಪದಲ್ಲಿ ಒಂದು ವಿಗ್ರಹ ಮಾಡಿಕೊಂಡರು. ಅದರ ಮುಂದೆ ತಮ್ಮ ಬಲಿಯನ್ನು ಕೊಟ್ಟು, ತಮ್ಮ ಕೈಕೃತಿಗಳಲ್ಲಿ ಹರ್ಷಗೊಂಡರು.