Acts 7:42 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ದೇವರು ಅವರಿಗೆ ವಿರೋಧವಾಗಿ, ಆಕಾಶದ ಸುಳ್ಳುದೇವರುಗಳನ್ನು ಪೂಜಿಸುವಂತೆ ಅವರನ್ನು ಬಿಟ್ಟುಬಿಟ್ಟನು. ಇದರ ಬಗ್ಗೆ ಪ್ರವಾದಿಗಳ ಪುಸ್ತಕದಲ್ಲಿ ಹೀಗೆ ಬರೆದಿದೆ: ದೇವರು ಹೀಗೆನ್ನುತ್ತಾನೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ದೇವರು ಅವರಿಗೆ ವಿಮುಖನಾಗಿ, ಆಕಾಶದ ನಕ್ಷತ್ರಗಣಗಳನ್ನು ಪೂಜಿಸುವುದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವುದೇನಂದರೆ, “‘ಇಸ್ರಾಯೇಲ್ ವಂಶದವರೇ, ನೀವು ಅರಣ್ಯದಲ್ಲಿದ್ದ ನಲವತ್ತು ವರ್ಷ ನನಗೆ ಯಜ್ಞಗಳನ್ನೂ, ಬಲಿಗಳನ್ನೂ ಅರ್ಪಿಸುತ್ತಿದ್ದಿರೋ? ಇಲ್ಲವಲ್ಲಾ;
Kannada BSI Bible 2016
ಆದರೆ ದೇವರು ಅವರಿಗೆ ವಿಮುಖನಾಗಿ ಆಕಾಶದ ನಕ್ಷತ್ರಗಣ ವನ್ನು ಪೂಜಿಸುವದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವದೇನಂದರೆ-- ಓ ಇಸ್ರಾಯೇಲ್‌ ಮನೆತನದವರೇ, ನೀವು ಅರಣ್ಯದಲ್ಲಿ ನಾಲ್ವತ್ತು ವರುಷ ಪ್ರಾಣಿಗಳನ್ನು ಕೊಂದು ಬಲಿಗಳನ್ನು ನನಗೆ ಅರ್ಪಿಸುತ್ತಿದ್ದಿರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ದೇವರು ಅವರಿಗೆ ವಿಮುಖನಾಗಿ ಆಕಾಶದ ನಕ್ಷತ್ರ ಗಣವನ್ನು ಪೂಜಿಸುವದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವದೇನಂದರೆ - ಇಸ್ರಾಯೇಲ್ ವಂಶದವರೇ, ನೀವು ಅರಣ್ಯದಲ್ಲಿದ್ದ ನಾಲ್ವತ್ತು ವರುಷ ನನಗೆ ಯಜ್ಞಗಳನ್ನೂ ಬಲಿಗಳನ್ನೂ ಅರ್ಪಿಸುತ್ತಿದ್ದಿರೋ? ಇಲ್ಲವಲ್ಲಾ;
Kannada Bible (KNCL) BSI 2016
ಆಗ ದೇವರು ಅವರಿಗೆ ವಿಮುಖರಾದರು. ಆಕಾಶದ ಗ್ರಹಗಳನ್ನೇ ಅವರು ಪೂಜಿಸಲೆಂದು ಬಿಟ್ಟುಬಿಟ್ಟರು. ಇದನ್ನು ಕುರಿತೇ ಪ್ರವಾದಿಗಳ ಗ್ರಂಥದಲ್ಲಿ: ‘ಓ ಇಸ್ರಯೇಲರೇ, ನೀವು ಮರಳುಗಾಡಿನಲ್ಲಿ ನಾಲ್ವತ್ತು ವರ್ಷಗಳಕಾಲ ದಹನಬಲಿಗಳನ್ನು ಅರ್ಪಿಸಿದ್ದು ನನಗಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ದೇವರು ಅವರಿಗೆ ವಿಮುಖನಾಗಿ, ಆಕಾಶದ ಗ್ರಹಗಳನ್ನೇ ಆರಾಧಿಸುವಂತೆ ಅವರನ್ನು ಬಿಟ್ಟುಬಿಟ್ಟರು. ಇದರ ವಿಷಯವಾಗಿ ಪ್ರವಾದಿಗಳ ಗ್ರಂಥದಲ್ಲಿ: “ ‘ಇಸ್ರಾಯೇಲಿನ ಮನೆತನದವರೇ, ನಲವತ್ತು ವರ್ಷ ಅರಣ್ಯದಲ್ಲಿ ಯಜ್ಞಗಳನ್ನೂ ಕಾಣಿಕೆಗಳನ್ನೂ ಸಮರ್ಪಿಸಿದ್ದು ನನಗಲ್ಲ.