Acts 7:44 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ದೇವರು ನಮ್ಮ ಪಿತೃಗಳೊಂದಿಗೆ ಯಾವ ಗುಡಾರದಲ್ಲಿ ಮತಾಡಿದ್ದನೋ ಆ ಗುಡಾರವು ಈ ಯೆಹೂದ್ಯರೊಂದಿಗೆ ಮರಳುಗಾಡಿನಲ್ಲಿತ್ತು. ಈ ಗುಡಾರವನ್ನು ನಿರ್ಮಿಸುವ ಬಗೆಯನ್ನು ದೇವರು ಮೋಶೆಗೆ ತಿಳಿಸಿಕೊಟ್ಟನು. ದೇವರು ತನಗೆ ತೋರಿಸಿದ ಆಕಾರದಂತೆಯೇ ಮೋಶೆಯು ಅದನ್ನು ನಿರ್ಮಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ದೇವದರ್ಶನ ಗುಡಾರವು ಮರುಭೂಮಿಯಲ್ಲಿ ನಮ್ಮ ಪೂರ್ವಿಕರ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದವನು, ನೀನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸಬೇಕೆಂದು ಆಜ್ಞಾಪಿಸಿದ್ದನು.
Kannada BSI Bible 2016
ಸಾಕ್ಷೀಗುಡಾರವು ಅಡವಿಯೊಳಗೆ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದಾತನು ಅವನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸ ಬೇಕೆಂದು ನೇಮಿಸಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವದರ್ಶನಗುಡಾರವು ಅಡವಿಯೊಳಗೆ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತಾಡಿದವನು - ನೀನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸಬೇಕೆಂದು ನೇವಿುಸಿದ್ದನು.
Kannada Bible (KNCL) BSI 2016
“ದೇವಪ್ರಸನ್ನತೆಯ ಗುಡಾರವು ನಮ್ಮ ಪೂರ್ವಜರ ಬಳಿ ಮರಳುಗಾಡಿನಲ್ಲಿತ್ತು. ಮೋಶೆಯೊಡನೆ ಮಾತನಾಡಿದ ದೇವರು ಅವನಿಗಿತ್ತ ಆಜ್ಞೆಯಂತೆ ಹಾಗೂ ತೋರಿಸಿದ ಆಕಾರದಂತೆ ಅದನ್ನು ನಿರ್ಮಿಸಲಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅರಣ್ಯದಲ್ಲಿ ದೇವದರ್ಶನ ಗುಡಾರ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ದೇವರು ಮೋಶೆಗೆ ಆಜ್ಞಾಪಿಸಿದಂತೆ, ಅವನಿಗೆ ತೋರಿಸಿದ ಮಾದರಿಯಂತೆ ಅದನ್ನು ರೂಪಿಸಲಾಗಿತ್ತು.