Acts 7:45 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತರುವಾಯ ಇತರ ಜನಾಂಗಗಳ ನಾಡುಗಳನ್ನು ವಶಪಡಿಸಿಕೊಳ್ಳುವುದಕ್ಕಾಗಿ ಯೆಹೋಶುವನು ನಮ್ಮ ಪಿತೃಗಳನ್ನು ಮುನ್ನಡೆಸಿದನು. ನಮ್ಮ ಜನರು ಆ ದೇಶದೊಳಗೆ ಹೋದಾಗ, ದೇವರು ಇತರ ಜನರನ್ನು ಅಲ್ಲಿಂದ ಹೊರಡಿಸಿಬಿಟ್ಟನು. ನಮ್ಮ ಜನರು ಆ ಹೊಸ ದೇಶದೊಳಗೆ ಹೋದಾಗ ಈ ಗುಡಾರವನ್ನು ತಮ್ಮೊಂದಿಗೆ ತೆಗೆದುಕೊಂಡು ಹೋದರು. ನಮ್ಮ ಜನರು ಈ ಗುಡಾರವನ್ನು ತಮ್ಮ ಪಿತೃಗಳಿಂದ ಸ್ವೀಕರಿಸಿಕೊಂಡು ದಾವೀದನ ಕಾಲದವರೆಗೂ ಅದನ್ನು ಇಟ್ಟುಕೊಂಡಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ಹಿರಿಯರು ಅದನ್ನು ತಮ್ಮ ಪೂರ್ವಿಕರಿಂದ ಹೊಂದಿದ್ದರು. ಅವರು ಯೆಹೋಶುವನನ್ನು ಅನುಸರಿಸಿ ಬಂದು ದೇವರು ತಳ್ಳಿಬಿಟ್ಟ ಅನ್ಯಜನಗಳ ದೇಶವನ್ನು ಸ್ವಾಧೀನಮಾಡಿಕೊಂಡಾಗ ಆ ಗುಡಾರವನ್ನು ಕೂಡ ತಂದರು. ಅದು ದಾವೀದನ ಕಾಲದವರೆಗೂ ಅಲ್ಲೇ ಇತ್ತು.
Kannada BSI Bible 2016
ತರುವಾಯ ಬಂದ ನಮ್ಮ ಪಿತೃಗಳು ಸಹ ತಮ್ಮ ಮುಂದೆ ದೇವರು ಹೊರಡಿಸಿದ ಅನ್ಯಜನಗಳ ಸ್ವಾಸ್ತ್ಯವನ್ನು ಸ್ವಾಧೀನ ಮಾಡಿಕೊಂಡಾಗ ಯೆಹೋಶುವನ ಕೂಡ ಆ ಗುಡಾರವನ್ನು ತಂದರು. ಅದು ದಾವೀದನ ಕಾಲದ ವರೆಗೂ ಅಲ್ಲೇ ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ಹಿರಿಯರು ಅದನ್ನು ತಮ್ಮ ತಂದೆಗಳಿಂದ ಹೊಂದಿದರು; ಅವರು ಯೆಹೋಶುವನ ಹಿಂದೆ ಬಂದು ದೇವರು ತಮ್ಮ ಮುಂದೆ ಹೊರಡಿಸಿದ ಅನ್ಯಜನಗಳ ದೇಶವನ್ನು ಸ್ವಾಧೀನಮಾಡಿಕೊಂಡಾಗ ಆ ಗುಡಾರವನ್ನು ಕೂಡ ತಂದರು. ಅದು ದಾವೀದನ ಕಾಲದವರೆಗೂ ಇಲ್ಲೇ ಇತ್ತು.
Kannada Bible (KNCL) BSI 2016
ಅನಂತರ ಬಂದ ನಮ್ಮ ಪಿತೃಗಳು ಅದನ್ನು ಸ್ವಾಸ್ತ್ಯವಾಗಿ ಪಡೆದರು. ದೇವರು ಅನ್ಯಜನಾಂಗಗಳನ್ನು ಓಡಿಸಿ ಸ್ವಾಧೀನಮಾಡಿಕೊಟ್ಟ ನಾಡಿಗೆ, ಅವರು ಯೆಹೋಶುವನ ಮುಖಂಡತ್ವದಲ್ಲಿ ಹೋದಾಗ, ಆ ಗುಡಾರವನ್ನೂ ತೆಗೆದುಕೊಂಡು ಹೋದರು. ದಾವೀದನ ಕಾಲದವರೆಗೂ ಅದು ಅಲ್ಲೇ ಇತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮ ಪಿತೃಗಳು ದೇವದರ್ಶನ ಗುಡಾರವನ್ನು ಪಡೆದುಕೊಂಡು, ಯೆಹೋಶುವನ ನಾಯಕತ್ವದ ಕೆಳಗೆ ದೇವರು ಅವರೆದುರಿನಲ್ಲಿ ಹೊರದೊಬ್ಬಿದ ದೇಶಗಳ ನಾಡನ್ನು ವಶಪಡಿಸಿಕೊಂಡಾಗ ಅದನ್ನು ತಮ್ಮೊಂದಿಗೆ ತೆಗೆದುಕೊಂಡು ಬಂದರು. ದಾವೀದನ ಕಾಲದವರೆಗೂ ಆ ಗುಡಾರವು ಅಲ್ಲಿಯೇ ಇತ್ತು.