Acts 7:51 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸ್ತೆಫನನು ಮಾತನ್ನು ಮುಂದುವರಿಸಿದನು: “ಮೊಂಡರಾದ ಯೆಹೂದ್ಯನಾಯಕರೇ! ನೀವು ನಿಮ್ಮ ಹೃದಯಗಳನ್ನು ದೇವರಿಗೆ ಕೊಟ್ಟಿಲ್ಲ. ನೀವು ಆತನಿಗೆ ಕಿವಿಗೊಡುವುದಿಲ್ಲ. ಪವಿತ್ರಾತ್ಮನು ನಿಮಗೆ ತಿಳಿಸಲು ಪ್ರಯತ್ನಿಸುತ್ತಿರುವ ವಿಷಯಕ್ಕೆ ನೀವು ಯಾವಾಗಲೂ ವಿರೋಧಿಗಳಾಗಿದ್ದೀರಿ. ನಿಮ್ಮ ಪಿತೃಗಳು ಹೀಗೆಯೇ ಮಾಡಿದರು ಮತ್ತು ನೀವೂ ಅವರಂತೆಯೇ ಇದ್ದೀರಿ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.
Kannada BSI Bible 2016
ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಚಂಡಿಗಳೇ, ಮನಶ್ಶುದ್ಧಿಯೂ ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.
Kannada Bible (KNCL) BSI 2016
ಸ್ತೇಫನನು ಮುಂದುವರೆದು, “ಎಷ್ಟು ಹಟಮಾರಿಗಳು ನೀವು; ಎಂಥಾ ಕಠಿಣ ಹೃದಯಿಗಳು ನೀವು’ ದೇವರ ಸಂದೇಶಕ್ಕೆ ಎಷ್ಟು ಕಿವುಡರು ನೀವು! ನಿಮ್ಮ ಪೂರ್ವಜರಂತೆ ನೀವು ಸಹ ಪವಿತ್ರಾತ್ಮ ಅವರನ್ನು ಯಾವಾಗಲೂ ಪ್ರತಿಭಟಿಸುತ್ತೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಹಟಮಾರಿಗಳೇ! ಹೃದಯದಲ್ಲಿಯೂ ಕಿವಿಯಲ್ಲಿಯೂ ಸುನ್ನತಿ ಹೊಂದದವರೇ, ನೀವು ಸಹ ನಿಮ್ಮ ಪಿತೃಗಳಂತೆಯೇ ಯಾವಾಗಲೂ ಪವಿತ್ರಾತ್ಮ ದೇವರನ್ನು ಎದುರಿಸುತ್ತೀರಿ!