Acts 7:58 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನನ್ನು ಪಟ್ಟಣದಿಂದ ಹೊರಗೆ ಎಳೆದೊಯ್ದು, ಅವನು ಸಾಯುವವರೆಗೂ ಅವನ ಮೇಲೆ ಕಲ್ಲುಗಳನ್ನು ಎಸೆದರು. ಸ್ತೆಫನನ ವಿರುದ್ಧವಾಗಿ ಸುಳ್ಳು ಹೇಳಿದ ಜನರು ತಮ್ಮ ಮೇಲಂಗಿಗಳನ್ನು ಬಿಚ್ಚಿ ಸೌಲನೆಂಬ ಯುವಕನಿಗೆ ಕೊಟ್ಟು,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನನ್ನು ಊರ ಹೊರಕ್ಕೆ ನೂಕಿಕೊಂಡು ಹೋಗಿ ಕೊಲ್ಲುವುದಕ್ಕೆ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಕಾಲುಗಳ ಬಳಿಯಲ್ಲಿ ಇಟ್ಟರು.
Kannada BSI Bible 2016
ಅವನನ್ನು ಊರಹೊರಕ್ಕೆ ನೂಕಿಕೊಂಡು ಹೋಗಿ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಪಾದಗಳ ಬಳಿಯಲ್ಲಿ ಇಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನನ್ನು ಊರ ಹೊರಕ್ಕೆ ನೂಕಿಕೊಂಡು ಹೋಗಿ ಕೊಲ್ಲುವದಕ್ಕೆ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಕಾಲುಗಳ ಬಳಿಯಲ್ಲಿ ಇಟ್ಟರು.
Kannada Bible (KNCL) BSI 2016
ಪಟ್ಟಣದಿಂದ ಹೊರಕ್ಕೆ ದಬ್ಬಿ ಅವನ ಮೇಲೆ ಕಲ್ಲು ತೂರಿದರು. ಸಾಕ್ಷಿಕೊಟ್ಟವರು ತಮ್ಮ ಬಟ್ಟೆಬರೆಗಳನ್ನು ತರುಣ ಸೌಲನ ವಶದಲ್ಲಿ ಇಟ್ಟಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನನ್ನು ಪಟ್ಟಣದ ಹೊರಗೆ ಎಳೆದುಕೊಂಡು ಹೋಗಿ ಅವನ ಮೇಲೆ ಕಲ್ಲೆಸೆಯಲು ಪ್ರಾರಂಭಿಸಿದರು. ಆ ಸಮಯದಲ್ಲಿ ಸಾಕ್ಷಿಗಳು ತಮ್ಮ ಬಟ್ಟೆಗಳನ್ನು ಸೌಲ ಎಂಬ ಹೆಸರಿನ ಒಬ್ಬ ಯುವಕನ ಪಾದಗಳ ಬಳಿಯಲ್ಲಿಟ್ಟಿದ್ದರು.