Acts 7:59 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸ್ತೆಫನನಿಗೆ ಕಲ್ಲುಗಳನ್ನು ಎಸೆದರು. ಆದರೆ ಸ್ತೆಫನನು ಪ್ರಾರ್ಥಿಸುತ್ತಾ, “ಪ್ರಭುವಾದ ಯೇಸುವೇ, ನನ್ನ ಆತ್ಮವನ್ನು ಸ್ವೀಕರಿಸಿಕೊ!” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು, ಅವನು ಕರ್ತನ ಹೆಸರನ್ನು ಹೇಳಿ, “ಕರ್ತನಾದ, ಯೇಸುವೇ, ನನ್ನಾತ್ಮವನ್ನು ಸೇರಿಸಿಕೋ” ಎಂದು ಪ್ರಾರ್ಥಿಸಿ,
Kannada BSI Bible 2016
ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು ಅವನು--ಕರ್ತನಾದ ಯೇಸುವೇ, ನನ್ನಾತ್ಮವನ್ನು ಸೇರಿ ಸಿಕೋ ಎಂದು ದೇವರನ್ನು ಪ್ರಾರ್ಥಿಸಿ,ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು ಅವನು ಕರ್ತನ ಹೆಸರನ್ನು ಹೇಳಿ -
Kannada Bible (KNCL) BSI 2016
ಅವರು ತನ್ನ ಮೇಲೆ ಕಲ್ಲುಬೀರುತ್ತಿದ್ದಾಗ ಸ್ತೇಫನನು, “ಪ್ರಭು ಯೇಸುವೇ, ನನ್ನಾತ್ಮವನ್ನು ಸ್ವೀಕರಿಸಿ,” ಎಂದು ಪ್ರಾರ್ಥಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನ್ಯಾಯಸಭೆಯವರು ಕಲ್ಲೆಸೆಯುತ್ತಿದ್ದಾಗ, ಸ್ತೆಫನನು, “ಕರ್ತ ಯೇಸುವೇ, ನನ್ನ ಆತ್ಮವನ್ನು ಸ್ವೀಕರಿಸಿರಿ,” ಎಂದು ಪ್ರಾರ್ಥಿಸಿದನು.