Acts 7:60 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ಮೊಣಕಾಲೂರಿ, “ಪ್ರಭುವೇ, ಈ ಪಾಪವನ್ನು ಇವರ ಮೇಲೆ ಹೊರಿಸಬೇಡ!” ಎಂದು ಧ್ವನಿಯೆತ್ತಿ ಹೇಳುತ್ತಾ ಪ್ರಾಣಬಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೊಣಕಾಲೂರಿ, “ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು” ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿ ನಿದ್ರೆಹೋದನು.
Kannada BSI Bible 2016
ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸುಸ್ವಾವಿುಯೇ, ನನ್ನಾತ್ಮವನ್ನು ಸೇರಿಸಿಕೋ ಎಂದು ಪ್ರಾರ್ಥಿಸಿ ಮೊಣಕಾಲೂರಿ - ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು.
Kannada Bible (KNCL) BSI 2016
ಅನಂತರ ಮೊಣಕಾಲೂರಿ, “ಪ್ರಭೂ, ಈ ಪಾಪವನ್ನು ಇವರ ಮೇಲೆ ಹೊರಿಸಬೇಡಿ,” ಎಂದು ಧ್ವನಿಯೆತ್ತಿ ಹೇಳುತ್ತಾ ಪ್ರಾಣಬಿಟ್ಟನು. ಸೌಲನು ಸ್ತೇಫನನ ಕೊಲೆಗೆ ಸಮ್ಮತಿಸಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಮೊಣಕಾಲೂರಿ, “ಕರ್ತ ಯೇಸುವೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡ,” ಎಂದು ಗಟ್ಟಿಯಾಗಿ ಕೂಗಿದನು. ಇದನ್ನು ಹೇಳಿದ ಮೇಲೆ, ಪ್ರಾಣಬಿಟ್ಟನು.