Acts 7:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ದೇವರು ಅಬ್ರಹಾಮನೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಆ ಒಡಂಬಡಿಕೆಯ ಗುರುತೇ ಸುನ್ನತಿ. ಹೀಗಿರಲು ಅಬ್ರಹಾಮನು ಒಬ್ಬ ಮಗನನ್ನು ಪಡೆದಾಗ, ಆ ಮಗನಿಗೆ ಎಂಟನೆಯ ದಿನದಲ್ಲಿ ಸುನ್ನತಿ ಮಾಡಿದನು. ಅವನ ಮಗನ ಹೆಸರು ಇಸಾಕ. ಇಸಾಕನು ಸಹ ತನ್ನ ಮಗನಾದ ಯಾಕೋಬನಿಗೆ ಸುನ್ನತಿ ಮಾಡಿದನು. ಮತ್ತು ಯಾಕೋಬನು ತನ್ನ ಗಂಡುಮಕ್ಕಳಿಗೆಲ್ಲಾ ಸುನ್ನತಿ ಮಾಡಿದನು. ಈ ಗಂಡುಮಕ್ಕಳೇ ಮುಂದೆ ಹನ್ನೆರಡು ಮಂದಿ ಪಿತೃಗಳಾದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ದೇವರು ಅವನ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅದಕ್ಕೆ ಗುರುತಾಗಿ ಸುನ್ನತಿಯನ್ನು ಏರ್ಪಡಿಸಿದನು. ಅದಕ್ಕನುಸಾರವಾಗಿ ಅಬ್ರಹಾಮನು ಇಸಾಕನನ್ನು ಪಡೆದು ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿಮಾಡಿದನು. ಮುಂದೆ ಇಸಾಕನು ಯಾಕೋಬನನ್ನು ಪಡೆದನು, ಯಾಕೋಬನು ಹನ್ನೆರಡು ಮಂದಿ ಪೂರ್ವಿಕರನ್ನು ಪಡೆದನು.
Kannada BSI Bible 2016
ಇದಲ್ಲದೆ ದೇವರು ಸುನ್ನತಿ ಎಂಬ ಒಡಂಬಡಿಕೆಯನ್ನು ಅವನಿಗೆ ಕೊಟ್ಟನು. ಹೀಗೆ ಅಬ್ರಹಾಮನಿಂದ ಇಸಾ ಕನು ಹುಟ್ಟಿದಾಗ ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿ ಮಾಡಿದನು. ಇಸಾಕನಿಂದ ಯಾಕೋಬನು ಹುಟ್ಟಿದನು. ಯಾಕೋಬನಿಂದ ಹನ್ನೆರಡು ಮಂದಿ ಮೂಲಪಿತೃಗಳು ಹುಟ್ಟಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ದೇವರು ಅವನ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅದಕ್ಕೆ ಗುರುತಾಗಿ ಸುನ್ನತಿಯನ್ನು ನೇವಿುಸಿದನು. ಅದಕ್ಕನುಸಾರವಾಗಿ ಅಬ್ರಹಾಮನು ಇಸಾಕನನ್ನು ಪಡೆದು ಎಂಟನೆಯ ದಿವಸದಲ್ಲಿ ಅವನಿಗೆ ಸುನ್ನತಿಮಾಡಿದನು. ಮುಂದೆ ಇಸಾಕನು ಯಾಕೋಬನನ್ನು ಪಡೆದನು, ಯಾಕೋಬನು ಹನ್ನೆರಡು ಮಂದಿ ಮೂಲಪಿತೃಗಳನ್ನು ಪಡೆದನು.
Kannada Bible (KNCL) BSI 2016
ಆಮೇಲೆ ದೇವರು ಅಬ್ರಹಾಮನೊಡನೆ ಒಡಂಬಡಿಕೆಯನ್ನು ಮಾಡಿಕೊಂಡರು; ಆ ಒಡಂಬಡಿಕೆಯ ಚಿಹ್ನೆಯನ್ನಾಗಿ ಸುನ್ನತಿಯನ್ನು ವಿಧಿಸಿದರು.ಅದರಂತೆ ಅಬ್ರಹಾಮನು ತನ್ನ ಮಗ ಇಸಾಕನಿಗೆ ಹುಟ್ಟಿದ ಎಂಟನೆಯ ದಿನ ಸುನ್ನತಿಯನ್ನು ಮಾಡಿದನು. ಇಸಾಕನು ತನ್ನ ಮಗ ಯಕೋಬನಿಗೂ, ಯಕೋಬನು ತನ್ನ ಹನ್ನೆರಡು ಮಕ್ಕಳಾದ ನಮ್ಮ ಪಿತಾಮಹರಿಗೂ ಹಾಗೆಯೇ ಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ದೇವರು ಅಬ್ರಹಾಮನಿಗೆ ಸುನ್ನತಿಯ ಒಡಂಬಡಿಕೆಯನ್ನೂ ಕೊಟ್ಟರು. ಅಬ್ರಹಾಮನಿಗೆ ಇಸಾಕನು ಜನಿಸಿದನು. ಇಸಾಕನು ಜನಿಸಿದ ಎಂಟನೆಯ ದಿನ ಅಬ್ರಹಾಮನು ಇಸಾಕನಿಗೆ ಸುನ್ನತಿ ಮಾಡಿಸಿದನು. ಅನಂತರ ಇಸಾಕನಿಗೆ ಯಾಕೋಬನು ಜನಿಸಿದನು. ಯಾಕೋಬನು ನಮ್ಮ ಹನ್ನೆರಡು ಮಂದಿ ಪಿತೃಗಳಿಗೆ ತಂದೆಯಾದನು.