Acts 8:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸ್ತೆಫನನ ಕೊಲೆಗೆ ಸೌಲನ ಸಮ್ಮತಿಯಿತ್ತು. ಕೆಲವು ಭಕ್ತರು ಸ್ತೆಫನನನ್ನು ಸಮಾಧಿ ಮಾಡಿದರು. ಅವರು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು. ಜೆರುಸಲೇಮಿನಲ್ಲಿದ್ದ ವಿಶ್ವಾಸಿಗಳ ಸಮುದಾಯವನ್ನು ಹಿಂಸಿಸಲು ಯೆಹೂದ್ಯರು ಅಂದೇ ಆರಂಭಿಸಿ ಅವರನ್ನು ಬಹಳವಾಗಿ ಸಂಕಟಪಡಿಸಿದರು. ಆ ಸಭೆಯನ್ನು ನಾಶಮಾಡಲು ಸೌಲನು ಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದೊಯ್ದು ಸೆರೆಮನೆಗೆ ಹಾಕಿದನು. ವಿಶ್ವಾಸಿಗಳೆಲ್ಲಾ ಜೆರುಸಲೇಮನ್ನು ಬಿಟ್ಟುಹೋದರು. ಅಪೊಸ್ತಲರು ಮಾತ್ರ ಅಲ್ಲೇ ಇದ್ದರು. ವಿಶ್ವಾಸಿಗಳು ಜುದೇಯ ಮತ್ತು ಸಮಾರ್ಯದ ಬೇರೆಬೇರೆ ಸ್ಥಳಗಳಿಗೆ ಹೊರಟುಹೋದರು. (Verses 1-3)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೌಲನಿಗೆ ಅವನ ಕೊಲೆಗೆ ಸಮ್ಮತಿಸಿದನು. ಆ ದಿನದಲ್ಲಿ ಯೆರೂಸಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರು ಹೊರತಾಗಿ ಎಲ್ಲರೂ ಯೂದಾಯ, ಸಮಾರ್ಯ ಸೀಮೆಗಳಿಗೆ ಚದರಿಹೋದರು.
Kannada BSI Bible 2016
ಸೌಲನು ಅವನ ಕೊಲೆಗೆ ಸಮ್ಮತಿಸು ವವನಾಗಿದ್ದನು. ಆ ಕಾಲದಲ್ಲಿ ಯೆರೂಸ ಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರ ಹೊರತಾಗಿ ಎಲ್ಲರೂ ಯೂದಾಯ ಸಮಾರ್ಯ ಸೀಮೆಗಳಲ್ಲಿ ಚದರಿಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದನ್ನು ಹೇಳಿ ನಿದ್ರೆಹೋದನು. ಸೌಲನು ಅವನ ಕೊಲೆಗೆ ಸಮ್ಮತಿಸುವವನಾಗಿದ್ದನು. ಆ ದಿವಸದಲ್ಲಿ ಯೆರೂಸಲೇವಿುನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರು ಹೊರತಾಗಿ ಎಲ್ಲರು ಯೂದಾಯ ಸಮಾರ್ಯ ಸೀಮೆಗಳಲ್ಲಿ ಚದರಿಹೋದರು.
Kannada Bible (KNCL) BSI 2016
ಆ ದಿನವೇ ಜೆರುಸಲೇಮಿನ ಧರ್ಮಸಭೆಯ ವಿರುದ್ಧ ಕ್ರೂರ ಹಿಂಸೆ ಪ್ರಾರಂಭ ಆಯಿತು. ಪ್ರೇಷಿತರ ಹೊರತು ಇತರ ಭಕ್ತವಿಶ್ವಾಸಿಗಳು ಜುದೇಯ ಮತ್ತು ಸಮಾರಿಯ ಪ್ರಾಂತ್ಯಗಳಲ್ಲೆಲ್ಲಾ ಚದರಿಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೌಲನು ಸ್ತೆಫನನ ಕೊಲೆಗೆ ಸಮ್ಮತಿಸಿದ್ದನು. ಆ ದಿನವೇ ಯೆರೂಸಲೇಮಿನ ಸಭೆಗೆ ವಿರೋಧವಾಗಿ ಮಹಾಹಿಂಸೆ ಪ್ರಾರಂಭವಾಯಿತು, ಅಪೊಸ್ತಲರನ್ನು ಬಿಟ್ಟು ಉಳಿದವರೆಲ್ಲರೂ ಯೂದಾಯ ಮತ್ತು ಸಮಾರ್ಯ ಪ್ರಾಂತಗಳಿಗೆ ಚದರಿಹೋದರು.