Acts 8:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಜನರು ಪ್ರಭುವಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿದ್ದರು. ಆದರೆ ಪವಿತ್ರಾತ್ಮನು ಅವರಲ್ಲಿ ಯಾರ ಮೇಲೆಯೂ ಇನ್ನೂ ಇಳಿದು ಬಂದಿರಲಿಲ್ಲ. ಈ ಕಾರಣದಿಂದಲೇ ಪೇತ್ರ ಮತ್ತು ಯೋಹಾನರು ಪ್ರಾರ್ಥಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ಪವಿತ್ರಾತ್ಮವರವು ಅವರಲ್ಲಿ ಒಬ್ಬನ ಮೇಲಾದರೂ ಇನ್ನೂ ಬಂದಿರಲಿಲ್ಲ. ಅವರು ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನವನ್ನು ಮಾತ್ರ ಮಾಡಿಸಿಕೊಂಡಿದ್ದರು
Kannada BSI Bible 2016
(ಯಾಕಂದರೆ ಪವಿತ್ರಾತ್ಮನು ಅವರಲ್ಲಿ ಒಬ್ಬನ ಮೇಲಾದರೂ ಇನ್ನೂ ಬಂದಿರಲಿಲ್ಲ. ಅವರು ಕರ್ತನಾದ ಯೇಸುವಿನ ಹೆಸರಿ ನಲ್ಲಿ ಬಾಪ್ತಿಸ್ಮವನ್ನು ಮಾತ್ರ ಮಾಡಿಸಿಕೊಂಡಿದ್ದರು).
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ಆ ವರವು ಅವರಲ್ಲಿ ಒಬ್ಬನ ಮೇಲಾದರೂ ಇನ್ನೂ ಬಂದಿರಲಿಲ್ಲ. ಅವರು ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನವನ್ನು ಮಾತ್ರ ಮಾಡಿಸಿಕೊಂಡಿದ್ದರು.
Kannada Bible (KNCL) BSI 2016
ಏಕೆಂದರೆ, ಅವರು ಪ್ರಭು ಯೇಸುವಿನ ನಾಮದಲ್ಲಿ ದೀಕ್ಷಾಸ್ನಾನವನ್ನು ಪಡೆದಿದ್ದರೇ ಹೊರತು ಅವರಲ್ಲಿ ಯಾರ ಮೇಲೂ ಆ ವರವು ಬಂದಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಅವರಲ್ಲಿ ಯಾರ ಮೇಲೆಯೂ ಪವಿತ್ರಾತ್ಮ ಬಂದಿರಲಿಲ್ಲ, ಅವರು ಕರ್ತ ಯೇಸುವಿನ ನಾಮದಲ್ಲಿ ದೀಕ್ಷಾಸ್ನಾನವನ್ನು ಹೊಂದಿದ್ದರಷ್ಟೇ.