Acts 8:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ಹೃದಯವನ್ನು ಮಾರ್ಪಡಿಸಿಕೊ! ನೀನು ಮಾಡಿದ ಕೆಟ್ಟಕಾರ್ಯದಿಂದ ತಿರುಗಿಕೊ. ಪ್ರಭುವಿನಲ್ಲಿ ಪ್ರಾರ್ಥಿಸು. ನೀನು ಹೀಗೆ ಆಲೋಚಿಸಿದ್ದನ್ನು ಆತನು ಕ್ಷಮಿಸಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಈ ನಿನ್ನ ಕೆಟ್ಟತನವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೋ ಕರ್ತನು ನಿನ್ನ ಮನಸ್ಸಿನ ಆಲೋಚನೆಯನ್ನು ಕ್ಷಮಿಸುವನೋ ಏನೋ ಆತನನ್ನು ಬೇಡಿಕೋ.
Kannada BSI Bible 2016
ಆದದರಿಂದ ಈ ನಿನ್ನ ಕೆಟ್ಟತನದ ವಿಷಯವಾಗಿ ಮಾನಸಾಂತರಪಟ್ಟು ದೇವರನ್ನು ಬೇಡಿಕೋ, ಆಗ ನಿನ್ನ ಹೃದಯದ ಆಲೋಚನೆಯು ಕ್ಷಮಿಸಲ್ಪಡಬಹುದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಈ ನಿನ್ನ ಕೆಟ್ಟತನವನ್ನು ಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಕರ್ತನು ನಿನ್ನ ಮನಸ್ಸಿನ ಆಲೋಚನೆಯನ್ನು ಕ್ಷವಿುಸುವನೋ ಏನೋ ಆತನನ್ನು ಬೇಡಿಕೋ.
Kannada Bible (KNCL) BSI 2016
ನಿನ್ನ ದುರಾಲೋಚನೆಗಾಗಿ ಪಶ್ಚಾತ್ತಾಪಪಡು; ನಿನ್ನ ದುರುದ್ದೇಶವನ್ನು ಕ್ಷಮಿಸಲೆಂದು ಪ್ರಭುವನ್ನು ಪ್ರಾರ್ಥಿಸು; ಅವರು ಕ್ಷಮಿಸಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ದುಷ್ಟತನಕ್ಕಾಗಿ ಪಶ್ಚಾತ್ತಾಪಪಟ್ಟು ಕರ್ತ ಯೇಸುವನ್ನು ಬೇಡಿಕೋ, ಒಂದು ವೇಳೆ ಅವರು ನಿನ್ನ ಹೃದಯದಲ್ಲಿದ್ದ ಈ ವಿಚಾರವನ್ನು ಕ್ಷಮಿಸಬಹುದು.